ಕಾರು ಡಿಕ್ಕಿಯಾಗಿ ಹುಲಿಕಲ್‌ನ 102 ವರ್ಷದ ಮೀನಜ್ಜ ಕೊನೆಯುಸಿರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

HOSANAGARA NEWS, 12 NOVEMBER 2024 : ಮೀನಜ್ಜ (Fish) ಎಂದೇ ಚಿರಪರಿಚಿತರಾಗಿದ್ದ ಶತಾಯುಷಿ ಕೃಷ್ಣ ದೇವರು (102) ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಹುಲಿಕಲ್‌ನಲ್ಲಿ ಭಾನುವಾರ ರಾತ್ರಿ ಅಪಘಾತ ಸಂಭವಿಸಿತ್ತು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಟ್ಯಾಂಕರ್‌ ಓವರ್‌ ಟೇಕ್‌ ಮಾಡುವ ಭರದಲ್ಲಿ ಕಾರು ಕೃಷ್ಣ ದೇವರು ಅವರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಮೀನಜ್ಜನನ್ನು ನಗರದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

hulikal-meenajja-Krishna-Devaru-succumbed.

ಶತಾಯುಷಿಯ ಸ್ವಾಭಿಮಾನದ ಬದುಕು

ಮೀನು ಹಿಡಿದು ಮಾರಾಟ ಮಾಡಿ ಕೃಷ್ಣ ದೇವರು ಜೀವನ ನಡೆಸುತ್ತಿದ್ದರು. ಇದೇ ಕಾರಣಕ್ಕೆ ಅವರು ಮೀನಜ್ಜ ಎಂದು ಸುತ್ತಮುತ್ತಲು ಚಿರಪರಿಚಿತರಾಗಿದ್ದರು. ಹುಲಿಕಲ್‌ನಲ್ಲಿ ತಾವೇ ನಿರ್ಮಿಸಿದ್ದ ಶೆಡ್‌ನಲ್ಲಿ ವಾಸವಾಗಿದ್ದರು. 102 ವರ್ಷವಾಗಿದ್ದರು ಗಟ್ಟಿಮುಟ್ಟಾಗಿದ್ದರು. ಯಾರನ್ನು ಅವಲಂಬಿಸದೆ ಸ್ವಾಭಿಮಾನದಿಂದ ಬದುಕು ನಡೆಸುತ್ತಿದ್ದರು.

ಘಟನೆ ಸಂಬಂದ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ » ಮೂರು ದಿನ ಶಿವಮೊಗ್ಗ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಲು ನಿಷೇಧಾಜ್ಞೆ, ಎಲ್ಲೆಲ್ಲಿ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment