ಹೊಳೆ ಸ್ಟಾಪ್‌ನಲ್ಲಿ ಡಿವೈಡರ್‌ಗೆ ಬಸ್‌ ಡಿಕ್ಕಿ, ತಪ್ಪಿದ ಅನಾಹುತ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIMOGA NEWS, 13 NOVEMBER 2024 : ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಶಿವಮೊಗ್ಗ ಹೊಳೆ ಬಸ್‌ ನಿಲ್ದಾಣ ಸಮೀಪ ಘಟನೆ ಸಂಭವಿಸಿದೆ.

ಭದ್ರಾವತಿಯಿಂದ ಶಿವಮೊಗ್ಗ ನಿಲ್ದಾಣಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್‌ ಅಪಘಾತಕ್ಕೀಡಾಗಿದೆ. ಹೊಸ ಸೇತುವೆ ಮೇಲೆ ಬಂದ ಬಸ್‌ ಬಿ.ಹೆಚ್‌.ರಸ್ತೆಯಲ್ಲಿ ಎಡಕ್ಕೆ ತಿರುವು ಪಡೆಯಬೇಕಿತ್ತು. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ದೊಡ್ಡ ಅನಾಹುತ ತಪ್ಪಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

Bus-incident-at-Hole-Bus-stop-in-Shimoga-city.

ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ. ಇನ್ನು, ಬಸ್ಸಿನ ಎಡ ಭಾಗದಲ್ಲಿ ಹಾನಿಯಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಹೆದ್ದಾರಿ ತಡೆದ ಜನ, ಅಧಿಕಾರಿಗಳು ವಿರುದ್ಧ ಆಕ್ರೋಶ

Leave a Comment