ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 15 NOVEMBER 2024 : ಶಿವಮೊಗ್ಗ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರ ವರ್ಗಾವಣೆ ಮಾಡಲಾಗಿದೆ. ಅವರಿಂದ ತೆರವಾದ ಸ್ಥಳಕ್ಕೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತಹಶೀಲ್ದಾರ್ ವಿ.ಎಸ್.ರಾಜೀವ್ ಅವರನ್ನು ವರ್ಗಾಯಿಸಲಾಗಿದೆ (Transfer).
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರನ್ನು ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರದ ತಹಶೀಲ್ದಾರ್ ಗ್ರೇಡ್ 1 ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಲೋಕಸಭೆ ಚುನಾವಣೆ ಸಂದರ್ಭ ಚುನಾವಣೆ ಕರ್ತವ್ಯ ನಿರ್ವಹಿಸಲು ಬಿ.ಎನ್.ಗಿರೀಶ್ ಅವರನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಶಿವಮೊಗ್ಗಕ್ಕೆ ವರ್ಗಾಯಿಸಲಾಗಿತ್ತು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಚುನಾವಣೆ ಎರಡು ದಿನ ಮುನ್ನ ವರ್ಗ
ಆಡಳಿತಾತ್ಮಕ ಹಿತದೃಷ್ಟಿಯಿಂದ ತಹಶೀಲ್ದಾರ್ ಎಸ್.ವಿ.ಗಿರೀಶ್ ಅವರನ್ನು ವರ್ಗಾಯಿಸಲಾಗುತ್ತಿದೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ. ಇನ್ನೊಂದೆಡೆ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಕಂದಾಯ ಇಲಾಖೆಯಿಂದ ತಹಶೀಲ್ದಾರ್ ಎಸ್.ವಿ.ಗಿರೀಶ್ ಸ್ಪರ್ಧಿಸಿದ್ದರು. ಶನಿವಾರ ಮತದಾನ ನಡೆಯಲಿದೆ. ಎರಡು ದಿನ ಮೊದಲು ಅವರ ವರ್ಗಾವಣೆಯಾಗಿರುವುದು ಗಿರೀಶ್ ಅವರ ಬಣದಲ್ಲಿ ಅನುಮಾನ ಮೂಡಿಸಿದೆ.
ಇದನ್ನೂ ಓದಿ » ‘ಇದನ್ನೆಲ್ಲ ಬಿಟ್ಟು, ರಾಜ್ಯದ ಸಚಿವರುಗಳು ಶಬರಿಮಲೈಗೆ ಹೋಗಿ ಭಿಕ್ಷೆ ಬೇಡಲಿʼ