BREAKING NEWS | ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA NEWS, 15 NOVEMBER 2024 : ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ (FIR) ದಾಖಲು ಮಾಡಿಕೊಂಡಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಜಯನಗರ ಠಾಣೆ ಇನ್ಸ್‌ಪೆಕ್ಟರ್‌ ಹೆಚ್.ಎಂ.ಸಿದ್ದೇಗೌಡ ಪ್ರಕರಣ ದಾಖಲಿಸಿದ್ದಾರೆ. ಈಚೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದರು. ಈ ಸಂದರ್ಭ ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ.

KS-Eshwarappa-Press-meet-in-Shimoga-Press-Trust

ಎಫ್‌ಐಆರ್‌ನಲ್ಲಿ ಏನಿದೆ?

ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು, ಇಸ್ಲಾಮೀಕರಣಕ್ಕೆ ಕಾಂಗ್ರೆಸ್ ಸರ್ಕಾರ ನಿರಂತರವಾಗಿ ಬೆಂಬಲ ನೀಡುತ್ತಾ ಬಂದಿದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲೀಮರಿಗೆ ಶೇಕಡಾ 4 ರಷ್ಟು ಮಿಸಲಾತಿ ಘೋಷಣೆ ಮಾಡಲು ಹೊರಟಿದ್ದಾರೆ. ಇವರೇನು ಹಿಂದುಸ್ಥಾನವನ್ನು ಪಾಕಿಸ್ಥಾನ ಮಾಡಲು ಹೊರಟಿದ್ದಾರ? ಇದು ಹೀಗೆ ಮುಂದುವರೆದರೆ ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳುವ ಕಾಲ ದೂರವಿಲ್ಲ. ಕಾಂಗ್ರೆಸಿಗರನ್ನು ಹುಡುಕಿ ಹೊಡೆದು ಕೊಲ್ಲುವಂತಹ ದಿನಗಳು ಬಂದರೂ ಆಶ್ಚರ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

140823-Jayanagara-Police-Station

ಅನ್ಯ ಕೋಮು ಮತ್ತು ಅನ್ಯ ಪಕ್ಷದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ‘ಇದನ್ನೆಲ್ಲ ಬಿಟ್ಟು, ರಾಜ್ಯದ ಸಚಿವರುಗಳು ಶಬರಿಮಲೈಗೆ ಹೋಗಿ ಭಿಕ್ಷೆ ಬೇಡಲಿʼ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment