ಶಾಲಾ ಪ್ರವಾಸಕ್ಕೆ ಹೊರಟಿದ್ದ ಖಾಸಗಿ ಬಸ್‌ ಮರಕ್ಕೆ ಡಿಕ್ಕಿ

HOSANAGARA NEWS, 18 NOVEMBER 2024 : ಚಾಮರಾಜನಗರದಿಂದ ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ (Tour) ತೆರಳುತ್ತಿದ್ದ ಖಾಸಗಿ ಬಸ್‌ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 29 ಮಂದಿ ಗಾಯಗೊಂಡಿದ್ದಾರೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಹೊಸನಗರ ತಾಲೂಕು ಮಂಡಳ್ಳಿ ಸಮೀಪ ನರ್ತಿಗೆ ಬಳಿ ಘಟನೆ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಆಳಂದೂರಿನ ಎಸ್‌ಡಿವಿಎಸ್‌ ಶಾಲೆಯ ಮಕ್ಕಳು ಪ್ರವಾಸಕ್ಕೆ ತೆರಳುತ್ತಿದ್ದರು. ನರ್ತಿಗೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಮರಕ್ಕೆ ಡಿಕ್ಕಿ ಹೊಡೆದಿದೆ.

Chamarajanagara-Tour-Bus-mishap-at-hosanagara

Nanjappa Hospital Advertisement

ವಿಚಾರ ತಿಳಿದು ಸ್ಥಳೀಯರು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದರು. ನಗರ, ಹೊಸನಗರದ ಆಸ್ಪತ್ರೆಗಳು ಮತ್ತು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ಗಾಯಗೊಂಡು ಆತಂಕಕ್ಕೀಡಾಗಿದ್ದ ಮಕ್ಕಳು, ಶಿಕ್ಷಕರಿಗೆ ಸ್ಥಳೀಯರು ಧೈರ್ಯ ತುಂಬಿದ್ದಾರೆ. ಊಟದ ವ್ಯವಸ್ಥೆಯನ್ನೂ ಮಾಡಿ ಮಾನವೀಯತೆ ಮೆರೆದಿದ್ದಾರೆ.

8-YEAR-PROMO-IMAGE2-FOREIGN

ಇದನ್ನೂ ಓದಿ » ತುಂಗಭದ್ರ ನದಿ, ಹಸು ಮೈ ತೊಳೆಯಲು ಹೋದ ವ್ಯಕ್ತಿ ನಾಪತ್ತೆ

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment