ನೀರು ಕೇಳಿ ದಿಢೀರ್‌ ವೃದ್ಧೆಯ ಮನೆಯೊಳಗೆ ನುಗ್ಗಿದ ಅಪ್ರಾಪ್ತರು, 24 ಗಂಟೆಯಲ್ಲಿ ಪ್ರಕರಣ ಭೇದಿಸಿದ ಪೊಲೀಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 18 NOVEMBER 2024 : ಕುಡಿಯಲು ನೀರು ಕೇಳಿ ಏಕಾಏಕಿ ಮನೆಯೊಳಗೆ ನುಗ್ಗಿದ ನಾಲ್ವರು ಬಾಲಕರು, ವೃದ್ಧೆಯ ಬಾಯಿ ಗಟ್ಟಿಯಾಗಿ ಹಿಡಿದು ಚಿನ್ನದ ಸರ (Gold Chain) ಕಸಿದುಕೊಂಡು ಪರಾರಿಯಾಗಿದ್ದಾರೆ. ಘಟನೆ ನಡೆದು 24 ಗಂಟೆಯೊಳೆಗೆ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.  

ವಿನೋಬನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಸಂಬಂಧ 77 ವರ್ಷದ ವೃದ್ಧೆ ನೀಡಿದ್ದ ದೂರಿನ ಆಧಾರದಲ್ಲಿ ಇನ್ಸ್‌ಪೆಕ್ಟರ್‌ ಸಿದ್ದೇಗೌಡ ನೇತೃತ್ವದಲ್ಲಿ ಪಿಎಸ್‌ಐ ಸುನಿಲ್‌, ಸಿಬ್ಬಂದಿ ಕೆ.ಆರ್‌.ರಾಜು, ಚಂದ್ರನಾಯ್ಕ್‌, ಮಲ್ಲಪ್ಪ, ಅರುಣ್‌ ಕುಮಾರ್‌ ನೇತೃತ್ವದ ತಂಡ ತನಿಖೆ ನಡೆಸಿತು.

gold-chain-recovered-by-police-in-Shimoga

ಇದನ್ನೂ ಓದಿ » ಶಾಲಾ ಪ್ರವಾಸಕ್ಕೆ ಹೊರಟಿದ್ದ ಖಾಸಗಿ ಬಸ್‌ ಮರಕ್ಕೆ ಡಿಕ್ಕಿ

ಕಾನೂನು ಸಂಘರ್ಷಕ್ಕೆ ಒಳಗಾದ ನಾಲ್ವರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರಿಂದ  65 ಸಾವಿರ ರೂ. ಮೌಲ್ಯದ ಚಿನ್ನದ ಸರವನ್ನು ವಶಕ್ಕೆ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment