ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 18 NOVEMBER 2024 : ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಏರ್ಪಟ್ಟಿದೆ. ಈ ಪೈಪೋಟಿಯ ಕಾರಣಕ್ಕೆ ಕಾಂಗ್ರೆಸ್‌ನಲ್ಲಿ ಕುದುರೆ ವ್ಯಾಪಾರ (Operation) ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಆಪರೇಷನ್ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಶಾಸಕ ರವಿ ಗಾಣಿಗ ಮಾತ್ರವಲ್ಲದೆ ಮುಖ್ಯಮಂತ್ರಿಯವರು ಕೂಡ ಶಾಸಕರ ಖರೀದಿಯ ಕುರಿತು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಮಯ ಹತ್ತಿರವಾಗಿದೆ. ಹಾಗಾಗಿ ಕಾಂಗ್ರೆಸ್ ಪಕ್ಷದೊಳಗೇ ಕುದುರೆ ವ್ಯಾಪಾರ ನಡೆಯುತ್ತಿದೆ. ಎಷ್ಟೆಷ್ಟು ಶಾಸಕರನ್ನು ದುಡ್ಡು ಕೊಟ್ಟು ಖರೀದಿಸಬಹುದು ಎಂದು ಕಾಂಗ್ರೆಸ್‌ನೊಳಗೆ ಪೈಪೋಟಿ ಇದೆ. 50 ಕೋಟಿ ರೂ. ಕೊಡುತ್ತಾರೋ, 100 ಕೋಟಿ ರೂ. ಕೊಡುತ್ತಾರೋ ಆ ಪಕ್ಷದ ಘಟಾನೂಘಟಿಗಳಿಗೆ ಬಿಟ್ಟಿದ್ದು ಎಂದರು.
ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರಿನಲ್ಲಿ ಬಿಜೆಪಿ ಮತ್ತು ಎನ್‌ಡಿಎ ಅಭ್ಯರ್ಥಿ ಗೆಲುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ಹೇಳುತ್ತಿಲ್ಲ. ಬದಲಾಗಿ ಆ ಭಾಗದ ಜನರ ಭಾವನೆ ಅರ್ಥ ಮಾಡಿಕೊಂಡಿದ್ದೇನೆ. ಮೂರು ಕ್ಷೇತ್ರಗಳಲ್ಲಿಯು ವಿಜಯಶಾಲಿಯಾಗುತ್ತೇವೆ.
ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
15 ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಗೆ ರಾಜ್ಯದ ಅಭಿವೃದ್ಧಿ ಮತ್ತು ಗ್ಯಾರಂಟಿಗೆ ಹಣ ಕ್ರೋಢೀಕರಿಸಲು ಆಗುತ್ತಿಲ್ಲ. ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ. ಅದ್ದರಿಂದ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ ಬಡವರ ಮೇಲೆ ಬರೆ ಎಳೆಯಲಾಗುತ್ತಿದ್ದಾರೆ. ಸರ್ಕಾರವನ್ನು ಬಡವರು ಕ್ಷಮಿಸುವುದಿಲ್ಲ ಎಂದು ವಿಜಯೇಂದ್ರ ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ನ.21ರಿಂದ ಅಂತಾರಾಜ್ಯ ಮಹಿಳಾ ಕ್ರಿಕೆಟ್
Operation
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422