ಶಿವಮೊಗ್ಗ ಜಿಲ್ಲೆಯ ವಿವಿಧ ಶಾಲೆಗಳಿಗೆ ನ.23ರಂದು ರಜೆ

SHIMOGA NEWS, 20 NOVEMBER 2024 : ವಿವಿಧ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ನಾನಾ ಕಾರಣಕ್ಕೆ ತೆರವಾಗಿರುವ ಸ್ಥಾನಗಳಿಗೆ ನ.23ರಂದು ಚುನಾವಣೆ ನಡೆಯಲಿದೆ. ಬಹುತೇಕ ಶಾಲೆಗಳಲ್ಲಿಯೇ (School) ಮತದಾನ ಕೇಂದ್ರ ಸ್ಥಾಪಿಸಲಾಗಿದೆ. ಹಾಗಾಗಿ ಚುನಾವಣೆ ನಡೆಯುವ ದಿನಾಂಕದಂದು ಈ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮತದಾನದ ಸಮಯದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಗಮಿಸಲಿದ್ದಾರೆ. ಇದರಿಂದ ಜನದಟ್ಟಣೆ ಉಂಟಾಗಲಿದೆ. ಮತದಾನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಶಿವಮೊಗ್ಗ ಜಿಲ್ಲೆಯ ಮತದಾನ ಕೇಂದ್ರವಿರುವ ಶಾಲೆಗಳಿಗೆ ನ.23 ರ ಶನಿವಾರದಂದು ರಜೆ ಘೋಷಿಸಲಾಗಿದೆ.

ಗುರುದತ್ತ ಹೆಗಡೆ, ಜಿಲ್ಲಾಧಿಕಾರಿ

RED-LINE-

ಯಾವ್ಯಾವ ಶಾಲೆಗೆ ರಜೆ?

ಶಿವಮೊಗ್ಗ ತಾಲೂಕಿನ ದೇವಕಾತಿಕೊಪ್ಪದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಹೊಳಲೂರು ಅಂಗನವಾಡಿ ಕೇಂದ್ರ ಜನತಾ ಕಾಲೋನಿ. ಭದ್ರಾವತಿ ತಾಲೂಕಿನ ಬಾರಂದೂರು ಸ. ಹಿ.ಪ್ರಾ.ಶಾಲೆ (ಉತ್ತರಭಾಗ). ತೀರ್ಥಹಳ್ಳಿ ತಾಲೂಕಿನ ಕಾಸರವಳ್ಳಿ ಸ.ಹಿ.ಪ್ರಾ.ಶಾಲೆ.

dc-gurudatta-hegde-IAS-Shimoga

ಶಿಕಾರಿಪುರ ತಾಲೂಕಿನ ತರಲಘಟ್ಟ ಸ.ಹಿ.ಪ್ರಾ.ಶಾಲೆ, ಶಿಕಾರಿಪುರದ ಸರ್ಕಾರಿ ಉರ್ದು ಹಿ.ಪ್ರಾ.ಶಾಲೆ ಖಾಜಿ ಮೊಹಲ್ಲ ಹಾಗೂ ಶಿರಾಳಕೊಪ್ಪದ ಸರ್ಕಾರಿ ಉರ್ದು ಹಿ.ಪ್ರಾ.ಶಾಲೆ ಆಜಾದ್ ವೃತ್ತ. ಸಾಗರ ತಾಲೂಕಿನ ಕುದರೂರು ಸ.ಹಿ.ಪ್ರಾ.ಶಾಲೆ ಕೊ.ಸಂ.1 ಈ ಶಾಲೆಗಳಿಗೆ ನ.23 ರಂದು ರಜೆ ಘೋಷಿಸಲಾಗಿದೆ.  

ಇದನ್ನೂ ಓದಿ » ಮೈಸೂರಿನಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿ ಲಾಡ್ಜ್‌ನಲ್ಲಿ ನೇಣಿಗೆ ಶರಣು

School

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : November 20, 2024 at 2:00 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ನವೆಂಬರ್ 20, 2024

Leave a Comment