ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 20 NOVEMBER 2024 : 25 ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ನ.26 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ರ್ಯಾಲಿ (Rally) ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಆರ್.ಬಸವರಾಜಪ್ಪ, ಮಹಾದಾಯಿ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಸಮಸ್ಯೆ, ಕಾರ್ಮಿಕರ ಸಮಸ್ಯೆ ಬಗೆಹರಿಸುತ್ತಿಲ್ಲ. ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಇದಕ್ಕೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರ್ಯಾಲಿ ನಡೆಸಲಾಗುತ್ತಿದೆ ಎಂದರು.
ಸರ್ಕಾರಗಳು ಕೊಟ್ಟ ಮಾತಿಗೆ ತಪ್ಪಿ ನಡೆಯುತ್ತಿವೆ. ಚುನಾವಣೆ ಮತ್ತು ರೈತರ ಹೋರಾಟದ ಸಂದರ್ಭ ಲಿಖಿತ ರೂಪದಲ್ಲಿ ನೀಡಿದ್ದ ಭರವಸೆ ಈಡೇರಿಸಿಲ್ಲ. ರಾಜ್ಯ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡಿಲ್ಲ.
ಹೆಚ್.ಆರ್.ಬಸವರಾಜಪ್ಪ, ರೈತ ಸಂಘದ ರಾಜ್ಯಾಧ್ಯಕ್ಷ
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಟಿ.ಎಂ.ಚಂದ್ರಪ್ಪ, ಹಿಟ್ಟೂರು ರಾಜು, ಕೆ.ರಾಘವೇಂದ್ರ, ಕೆ. ರುದ್ರೇಶ್, ಎನ್.ಡಿ. ನಾಗರಾಜ್, ಚಂದ್ರಪ್ಪ ಸೇರಿದಂತೆ ಹಲವರಿದ್ದರು.
ಇದನ್ನೂ ಓದಿ » ಮೂರು ರೈಲುಗಳ ಸಂಚಾರ ರದ್ದು, ಕೆಲವು ರೈಲುಗಳ ಸಮಯದಲ್ಲಿ ಬದಲಾವಣೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422