SHIMOGA NEWS, 20 NOVEMBER 2024 : ಕರ್ನಾಟಕ ಲೋಕಾಯುಕ್ತ ಪೊಲೀಸ್ (Lokayukta) ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಈ ಸುದ್ದಿಯನ್ನು ಇನ್ನು 59 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಎಲ್ಲೆಲ್ಲಿ ಯಾವಾಗ ಸಭೆ?
ನ.22 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ, ನ.25 ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ.

ನ.26 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣ. ನ.27 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಭದ್ರಾವತಿ ನಗರಸಭೆ ಸಭಾಂಗಣ, ನ.28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.
ಏನೆಲ್ಲ ದೂರು ನೀಡಬಹುದು?
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಬಹುದು ಎಂದು ಶಿವಮೊಗ್ಗ ಲೋಕಾಯುಕ್ತ ಡಿವೈಎಸ್ಪಿ ತಿಳಿಸಿದ್ದಾರೆ.
ಇದನ್ನೂ ಓದಿ » ತುಂಗಾ ನದಿಯಲ್ಲಿ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆ
