ಶಿವಮೊಗ್ಗ ATNC ಕಾಲೇಜಿನಿಂದ ಆಚಾರ್ಯ ಕನ್ನಡ ಉತ್ಸವ

SHIMOGA NEWS, 20 NOVEMBER 2024 : ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC) ವತಿಯಿಂದ ಕುವೆಂಪು ವಿಶ್ವವಿದ್ಯಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕುವೆಂಪು ರಂಗಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ‘ಆಚಾರ್ಯ ಕನ್ನಡ ಉತ್ಸವ – 2024’ ನಡೆಯಿತು. ಸಾಧಕರನ್ನು ಸನ್ಮಾನಿಸಲಾಯಿತು. ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್‌.ಎನ್.ನಾಗರಾಜ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಭಾಷೆ ನಮ್ಮ ಭಾವನೆಗಳನ್ನು ವ್ಯಕ್ತಪಡಿಸುವ ಸಾಧನ. ಕರ್ನಾಟಕದ ನೆಲದಲ್ಲಿ ಕನ್ನಡದ ಉಳುವಿನ ಚರ್ಚೆ ನಡೆಯುವುದು ಬೇಸರದ ಸಂಗತಿ. ಸರ್ಕಾರ, ಸರ್ಕಾರೇತರ ಸಂಸ್ಥೆಗಳಲ್ಲಿ ವ್ಯವಹಾರಗಳು ಕನ್ನಡದಲ್ಲಿಯೆ ನಡೆದಾಗ ಭಾಷೆಯ ಬಗೆಗಿನ ಆತಂಕ ದೂರವಾಗಲಿದೆ. ಇಂಗ್ಲೀಷ್ ತುಂಬಾ ಅವ್ಯವಸ್ಥಿತ ಭಾಷೆ. ಅದರಲ್ಲಿನ ತಪ್ಪು ಸರಿ ತಿದ್ದಲು ಇಂದಿಗೂ ಯಾವುದೇ ಅಕಾಡೆಮಿಗಳಿಲ್ಲ‌.

ಶಿವಮೊಗ್ಗದಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ

ಎಸ್.ಎನ್.ನಾಗರಾಜ, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ

ATNC-College-Acharya-Kannad-habba-in-Kuvempu-rangamandira

RED-LINE-

ATNC-College-Acharya-Kannad-habba-in-Kuvempu-rangamandira

ಆಳುವ ಸರ್ಕಾರಗಳಿಗೆ ನನ್ನದೊಂದು ಪ್ರಶ್ನೆ, ಹಿಂದಿಯ ಬಗ್ಗೆ ನಿಮಗೆ ಮಮತೆಯಿದೆ. ಇಂಗ್ಲೀಷ್ ಬಗ್ಗೆ ವ್ಯಾಮೋಹವಿದೆ. ಅದರೆ ಕನ್ನಡಮ್ಮನ ಗುಡಿ ಕಟ್ಟಲು, ಕನ್ನಡದ ಧ್ವಜ ಎತ್ತಿ ಹಿಡಿಯಲು ನಿಮಗೆ ಆಗುತ್ತಿಲ್ಲವೆ. ಸರ್ಕಾರ ಇಂಗ್ಲೀಷ್ ಮಾಧ್ಯಮವನ್ನು ಅನಿವಾರ್ಯಗೊಳಿಸುತ್ತಿದೆ. ಲಾಭಕ್ಕಾಗಿ ಭಾಷೆಯನ್ನು ಬಂಡವಾಳವಾಗಿ ಮಾಡಿಕೊಂಡಿದ್ದಾರೆ. ಈ ಮೂಲಕ ನಮ್ಮ ಮಾತೃಭಾಷೆಯನ್ನು ಹಿಂದೆ ದೂಡುವಂತೆ ಮಾಡುತ್ತಿದ್ದಾರೆ.

ಡಾ. ಸಬಿತಾ ಬನ್ನಾಡಿ, ಕುವೆಂಪು ವಿವಿ ಕನ್ನಡ ಅಧ್ಯಾಪಕರ ವೇದಿಕೆ ಅಧ್ಯಕ್ಷೆ

RED-LINE-

ಇದೇ ವೇಳೆ ಕರ್ನಾಟಕ ನಾಟಕ ಅಕಾಡೆಮಿ ಜಿಲ್ಲಾ ಸಂಚಾಲಕ ಗಣೇಶ್ ಕೆಂಚನಾಳ್ ಅವರನ್ನು ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಎಪಿಎಂಸಿ ಉದ್ದಿಮೆದಾರ ಡಿ.ಎಸ್.ಚಂದ್ರು, ವಿವಿಧ ವಿಭಾಗಗಳ ನಿರ್ದೇಶಕರಾದ ಪ್ರೊ.ಕೆ.ಎಂ.ನಾಗರಾಜು, ಮಂಜುನಾಥ. ಎನ್, ಶ್ರೀಲಲಿತ, ಗಾಯತ್ರಿ, ಪ್ರವೀಣ್.ಬಿ.ಎನ್, ಚೈತ್ರ.ಕೆ ಉಪಸ್ಥಿತರಿದ್ದರು.

ATNCC College Kannada rajyotsava

ATNCC College Kannada rajyotsava

ATNCC College Kannada rajyotsava

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ವಿವಿಧ ಶಾಲೆಗಳಿಗೆ ನ.23ರಂದು ರಜೆ

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment