ಶಿವಮೊಗ್ಗಕ್ಕೆ ನಾಳೆ ಪೌರಾಡಳಿತ ಸಚಿವರ ಭೇಟಿ, ಮಹತ್ವದ ಮೀಟಿಂಗ್‌

SHIMOGA NEWS, 21 NOVEMBER 2024 : ಪೌರಾಡಳಿತ ಮತ್ತು ಹಜ್ ಸಚಿವ (Minister) ರಹೀಂ ಖಾನ್‌ ನ.22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 1.55ಕ್ಕೆ ವಿಮಾನದ ಮೂಲಕ ಆಗಮಿಸಿ ಶಿವಮೊಗ್ಗ ಜಿಲ್ಲಾ ಪ್ರವಾಸಿ ಮಂದಿರದಲ್ಲಿ ತಂಗಲಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಮಧ್ಯಾಹ್ನ 3ಕ್ಕೆ ಶಿವಮೊಗ್ಗ ಜಿಲ್ಲಾ ಇಂದಿರಾ ಕ್ಯಾಂಟೀನ್ ಮತ್ತು ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಜಿಲ್ಲಾ ಆಡಳಿತ ಭವನದಲ್ಲಿ ನಡೆಯುವ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.00ಕ್ಕೆ ಜಿಲ್ಲಾ ಕಾಂಗ್ರೇಸ್ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಕೆ. ಮುರಳಿಧರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

Leave a Comment