ಶಿವಮೊಗ್ಗದಲ್ಲಿ ದಿನೇಶ್‌ ಅಮಿನ್‌ ಮಟ್ಟು ಉಪನ್ಯಾಸ, ಇಲ್ಲಿದೆ 3 ಪ್ರಮುಖ ಪಾಯಿಂಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 27 NOVEMBER 2024

ಶಿವಮೊಗ್ಗ : ಸಂವಿಧಾನ ದಿನದ ಅಂಗವಾಗಿ ಒಡನಾಟ ಸಂಸ್ಥೆ ವತಿಯಿಂದ ಪ್ರಜಾಪ್ರಭುತ್ವ, ಮಾಧ್ಯಮ ಮತ್ತು ನಾವು ವಿಷಯದ ಕುರಿತು ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಹ್ಯಾದ್ರಿ ವಾಣಿಜ್ಯ ಕಾಲೇಜು ಸಭಾಂಗಣದಲ್ಲಿ ಹಿರಿಯ ಪತ್ರಕರ್ತ ದಿನೇಶ್‌ ಅಮಿನ್‌ ಮಟ್ಟು ಉಪನ್ಯಾಸ (Lecture) ನೀಡಿದರು.

ದಿನೇಶ್‌ ಅಮಿನ್‌ ಮಟ್ಟು ಏನೆಲ್ಲ ಹೇಳಿದರು?

POINT-1ಸಂವಿಧಾನವನ್ನು ನಾವು ಗೌರವಿಸಬೇಕು. ನಮ್ಮನ್ನು ಗೌರವಿಸುವ ಸಂವಿಧಾನ ಬೇಕು ಎಂಬ ಪೇಜಾವರ ಶ್ರೀಗಳ ಮಾತು ಸಲ್ಲ. ಅವರು ಬಯಸಿರುವ ಸಂವಿಧಾನ ಮನುಸ್ಮೃತಿ. ಡಾ.ಅಂಬೇಡ್ಕರ್ ರಚಿಸಿದ್ದ ಸಂವಿಧಾನವನ್ನು ಮೊದಲ ಬಾರಿಗೆ ಆರ್‌ಎಸ್‌ಎಸ್ ವಿರೋಧಿಸಿತ್ತು. ಈಗ ಸಂವಿಧಾನವನ್ನು ಬದಲಾವಣೆ ಮಾಡಲು ಆಗುವುದಿಲ್ಲ ಎಂಬ ಕಾರಣಕ್ಕೆ ಅದನ್ನು ದುರ್ಬಲ ಮಾಡುವ ಪ್ರಯತ್ನ ನಡೆದಿದೆ. ಸಂವಿಧಾನದ ರಕ್ಷಕರಾದ ರಾಜ್ಯಪಾಲರು ಈಗ ಏನು ಮಾಡುತ್ತಿದ್ದಾರೆ. ಪೇಜಾವರ ಶ್ರೀಗಳ ವಿರುದ್ಧ ಪ್ರಕರಣ ದಾಖಲಿಸಬೇಕಿತ್ತು.

Journalist-Dinesh-Amin-mattu-in-Shimoga-sahyadri-college

POINT-2ಸಂವಿಧಾನ ವಿರೋಧಿ ಹೇಳಿಕೆ ನೀಡುವವರ ವಿರುದ್ಧ ಧ್ವನಿ ಎತ್ತಬೇಕಾದ ಪ್ರಗತಿಪರರು ದಣಿದಿದ್ದಾರೆ ಎಂದೇ ನನ್ನ ಭಾವನೆ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ಸಿಎಂ ಮನೆ ಎದುರು ಕಾದು ಬೇರೆಯವರಿಂದ ಪ್ರಭಾವ ಬೀರಿಸಿ ಅಧಿಕಾರ ಪಡೆದ ಪ್ರಗತಿಪರರು, ಈಗ ನಾವು ನಿಷ್ಪಕ್ಷಪಾತಿಯಾಗಿರಬೇಕೆಂದು ಭಾವಿಸಿದಂತಿದೆ. ಹೀಗಾಗಿ ಪ್ರತಿರೋಧ ತೋರುತ್ತಿಲ್ಲ.

Dinesh Amin mattu in Shimoga Sahyadri College

POINT-3ಒಬ್ಬ ವ್ಯಕ್ತಿಗೆ ಇರುವಷ್ಟೆ ಅಭಿವ್ಯಕ್ತಿ ಸ್ವಾತಂತ್ರ್ಯ ಮಾಧ್ಯಮಗಳಿಗು ಇದೆ. ಈಗ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೀರಿ ಕಾರ್ಯನಿರ್ವಹಿಸಿದ ಪರಿಣಾಮ ಮಾಧ್ಯಮ ಸಂಸ್ಥೆಗಳಿಗೆ ನೊಟೀಸ್‌ ಬರುತ್ತಿವೆ. ಮಾಧ್ಯಮ ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಅನೇಕರು ಹೇಳುವುದುಂಟು. ಆದರೆ ಈ ಸಂಗತಿ ಸಂವಿಧಾನದಲ್ಲಿ ಉಲ್ಲೇಖವೇ ಆಗಿಲ್ಲ. ಭ್ರಷ್ಟತೆ ಎಂಬುದು ಸಮಾಜದ ಎಲ್ಲ ಹಂತಗಳಲ್ಲಿ ಬೇರು ಬಿಟ್ಟಿದೆ. ಅದಕ್ಕೆ ಮಾಧ್ಯಮವೂ ಹೊರತಾಗಿಲ್ಲ. ಎಲ್ಲವೂ ವಿಫಲವಾಗಿರುವಾಗ ಜನರು ಈಗ ಮಾಧ್ಯಮಗಳತ್ತ ನೋಡುತ್ತಿದ್ದಾರಷ್ಟೇ.

Dinesh Amin mattu in Shimoga Sahyadri College

ಪತ್ರಕರ್ತರಾದ ಜಿ.ಟಿ.ಸತೀಶ್ ಹಾಗೂ ಬಿ.ಎಸ್.ಅಂಜುಂ ಪ್ರತಿಕ್ರಿಯೆ ನೀಡಿದರು. ಫ್ರಾನ್ಸಿಸ್ ಡಿಸೋಜಾ ಕಾರ್ಯಕ್ರಮ ನಿರ್ವಹಿಸಿದರು.

ಕುವೆಂಪು ವಿ.ವಿ ಕುಲಪತಿ ಪ್ರೊ.ಶರತ್‌ ಅನಂತಮೂರ್ತಿ, ಕಾಲೇಜಿನ ಪ್ರಾಚಾರ್ಯ ಟಿ.ಅವಿನಾಶ್, ಒಡನಾಟ ಬಳಗದ ಅಕ್ಷತಾ ಹುಂಚದಕಟ್ಟೆ, ರೈತ ನಾಯಕರಾದ ಕೆ.ಟಿ.ಗಂಗಾಧರ, ಎಚ್.ಆರ್.ಬಸವರಾಜಪ್ಪ, ದಲಿತ ಸಂಘರ್ಷ ಸಮಿತಿಯ ಗುರುಮೂರ್ತಿ, ಅಂಕಣಕಾರ ಬಿ.ಚಂದ್ರೇಗೌಡ ಹಾಜರಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೋಡ ಕವಿದ ವಾತಾವರಣ, ಚಳಿ ಜೋರು

Lecture

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 27, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment