ಹೊಸನಗರದಲ್ಲಿ ಲೋಕಾಯುಕ್ತ ಪೊಲೀಸ್‌ ಬಲೆಗೆ ಎಪಿಪಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 NOVEMBER 2024

ಹೊಸನಗರ : ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಪ್ರಕರಣವೊಂದರ ಆರೋಪಿಯಿಂದ ಲಂಚ (Bribe) ಪಡೆಯುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಎಪಿಪಿ ರವಿಯನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಕಟಣೆಯಲ್ಲಿ ಏನಿದೆ?

ಆರೋಪಿಗೆ ಪ್ರಕರಣವನ್ನು ರಾಜಿ ಮಾಡಿಕೊಳ್ಳುವಂತೆ ತಿಳಿಸಿದ್ದ ಎಪಿಪಿ ರವಿ, 5 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. 1 ಸಾವಿರ ರೂ. ಹಣ ಪಡೆದಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನ.29ರಂದು ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಇದ್ದಾಗ ಸರ್ಕಾರಿ ಅಭಿಯೋಜಕರ ಕೊಠಡಿಯಲ್ಲಿ ಪುನಃ 3 ಸಾವಿರ ರೂ. ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಎಪಿಪಿ ರವಿಯನ್ನು ಬಂಧಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Lokayuktha-Raid-General-Image

ಲೋಕಾಯುಕ್ತ ಪೊಲೀಸ್‌ ಅಧೀಕ್ಷಕ ಎಂ.ಹೆಚ್‌.ಮಂಜುನಾಥ ಚೌದರಿ ನೇತೃತ್ವದಲ್ಲಿ ಟ್ರ್ಯಾಪ್ ಕಾರ್ಯಾಚರಣೆ ನಡೆಸಲಾಯಿತು. ಇನ್ಸ್‌ಪೆಕ್ಟರ್‌ಗಳಾದ ಪ್ರಕಾಶ್, ಹೆಚ್.ಎಸ್ ಸುರೇಶ್, ಸಿಬ್ಬಂದಿ ಯೋಗೇಶ್, ಟೀಕಪ್ಪ, ಸುರೇಂದ್ರ, ಪ್ರಶಾಂತ್ ಕುಮಾರ್, ಚೆನ್ನೇಶ್, ಆದರ್ಶ್, ದೇವರಾಜ್, ಪ್ರಕಾಶ್ ಬಾರಿಮರದ, ಪುಟ್ಟಮ್ಮ.ಎನ್, ಅಂಜಲಿ, ಗಂಗಾಧರ, ಜಯಂತ್, ಗೋಪಿ, ತರುಣ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ » ಐದು ವರ್ಷದ ಬಳಿಕ ಮತ್ತೆ ಸಹ್ಯಾದ್ರಿ ಉತ್ಸವ, ಏನೆಲ್ಲ ಸ್ಪರ್ಧೆ ಇರುತ್ತೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment