WEATHER REPORT | 1 DECEMBER 2024 (ಈ ಸುದ್ದಿಯನ್ನು ಇನ್ನು 41 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ಚಳಿ ಪ್ರಮಾಣ ತುಸು ಕಡಿಮೆಯಾಗಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದ ವರದಿಯಾಗಿದೆ. ಇವತ್ತು ಕೂಡ ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ.
ಇವತ್ತು ಎಲ್ಲಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ಸಭೆಯಲ್ಲಿ ದಿಢೀರ್ ಅಸ್ವಸ್ಥರಾದ IAS ಅಧಿಕಾರಿ, ತಕ್ಷಣ ಆರೈಕೆ ಮಾಡಿದ ಡಾ.ಸರ್ಜಿ
