ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 DECEMBER 2024
ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಯಲ್ಲಿ (Hospital) ಜನ ದಟ್ಟಣೆ ಹೆಚ್ಚಿದ್ದ ಸಂದರ್ಭ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನ ಜಿಪ್ ತೆಗೆದು ಒಳಗಿದ್ದ 2.20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವ ಮಾಡಲಾಗಿದೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.
ತಬಸುಮ್ ಎಂಬುವರ ಬ್ಯಾಗ್ನಿಂದ ಚಿನ್ನಾಭರಣ ಕಳ್ಳತನವಾಗಿದೆ. ತಬಸುಮ್ ತಮ್ಮ ತಾಯಿಯನ್ನು ವೈದ್ಯರ ಬಳಿ ಪರೀಕ್ಷೆಗೆ ಕರೆತಂದಿದ್ದರು. ಈ ಸಂದರ್ಭ ಮೆಗ್ಗಾನ್ ಆಶ್ಪತ್ರೆಯಲ್ಲಿ ಜನ ದಟ್ಟಣೆ ಹೆಚ್ಚಿತ್ತು. ವೈದ್ಯಕೀಯ ಪರೀಕ್ಷೆ ಮುಗಿಸಿ ಆಟೋದಲ್ಲಿ ಮೆನೆಗೆ ಹೊರಟಾಗ ವ್ಯಾನಿಟಿ ಬ್ಯಾಗ್ ಜಿಪ್ ತೆಗೆದಿರುವುದು ಗಮನಕ್ಕೆ ಬಂದಿತ್ತು.

ವ್ಯಾನಿಟಿ ಬ್ಯಾಗ್ ಪರಿಶೀಲಿಸಿದಾಗ ಚಿನ್ನಾಭರಣ ನಾಪತ್ತೆಯಾಗಿದ್ದವು. ಸೆ.18ರಂದು ಘಟನೆ ಸಂಭವಿಸಿತ್ತು. ತಬಸುಮ್ ಅವರ ಪತಿಗೆ ಹುಷಾರಿಲ್ಲದ ಕಾರಣ ಅವರು ಊರಿಗೆ ತೆರಳಿದ್ದು, ತಡವಾಗಿ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಡಿಕ್ಯಾತ್ಲಾನ್ 7K ಮ್ಯಾರಥಾನ್, ಈಗಲೆ ಹೆಸರು ನೋಂದಾಯಿಸಿ
Mc Gann Hospital
LATEST NEWS
- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು





