ಶಿವಮೊಗ್ಗ : ಫೆಂಗಾಲ್ ಚಂಡಮಾರತದ ಪರಿಣಾಮ ರಾಜ್ಯದ ವಿವಿಧೆಡೆ ಭಾನುವಾರ ಮಳೆಯಾಗಿದೆ. ಇವತ್ತು ಕೂಡ ಹಲವು ಕಡೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಡಿಕ್ಯಾತ್‌ಲಾನ್ 7K ಮ್ಯಾರಥಾನ್, ಈಗಲೆ ಹೆಸರು ನೋಂದಾಯಿಸಿ