ಸಿಲಿಂಡರ್‌ ಸ್ಪೋಟ, ಭದ್ರಾವತಿ ಗೋಬಿ ಮಂಚೂರಿ ಅಂಗಡಿ ಮಾಲೀಕ ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 4 DECEMBER 2024

ಭದ್ರಾವತಿ : ಗ್ಯಾಸ್‌ ಸಿಲಿಂಡರ್‌ ಸ್ಪೋಟಗೊಂಡು ಗಂಭೀರ ಗಾಯಗೊಂಡಿದ್ದ ಭದ್ರಾವತಿಯ ಗೋಬಿ (Gobi) ಮಂಚೂರಿ ಅಂಗಡಿ ಮಾಲೀಕ ಕೇಶವಮೂರ್ತಿ (61) ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಭದ್ರಾವತಿಯ ಕಾಳಕಾಂಬ ದೇವಸ್ಥಾನ ರಸ್ತೆಯ ನಿವಾಸಿ ಕೇಶವಮೂರ್ತಿ ಅವರ ಮನೆಯಲ್ಲಿ ಕಳೆದ ವಾರ ಸಿಲಿಂಡರ್‌ ಸೋರಿಕೆಯಾಗಿ ಸ್ಪೋಟ ಸಂಭವಿಸಿತ್ತು. ತೀವ್ರ ಗಾಯಗೊಂಡಿದ್ದ ಕೇಶವಮೂರ್ತಿ ಅವರನ್ನು ಶಿವಮೊಗ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.

gobi-manchuri-merchant-succumbed

ಮೃತರಿಗೆ ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರಿದ್ದಾರೆ. ಗ್ಯಾಸ್‌ ಸೋರಿಕೆಯಾಗಿ ಸ್ಪೋಟಗೊಂಡಾಗ ಕೇಶವಮೂರ್ತಿ ಅವರ ಪತ್ನಿ ಕನಕಲಕ್ಷ್ಮಿ ಕೂಡ ಗಾಯಗೊಂಡಿದ್ದರು. ಅವರನ್ನು ಕೂಡ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರು ಚೇತರಿಸಿಕೊಂಡಿದ್ದಾರೆ.

ಇದನ್ನೂ ಓದಿ » ಶಕ್ತಿ ಯೋಜನೆ, ಶಿವಮೊಗ್ಗದಲ್ಲಿ ಈವರೆಗೂ ಉಚಿತವಾಗಿ ಓಡಾಡಿದ ಮಹಿಳೆಯರೆಷ್ಟು?

ಹೊಸಮನೆ ರಸ್ತೆಯಲ್ಲಿ ಗೋಬಿ ಮಂಚೂರಿ ಅಂಗಡಿ ಮಾಲೀಕರಾದ ಕೇಶವಮೂರ್ತಿ ಅವರು ನಗರದ ಗಾಯತ್ರಿ ಕೋ ಆಪರೇಟೀವ್ ಸೊಸೈಟಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರ ಅಂತ್ಯ ಸಂಸ್ಕಾರ ಹೊಳೆಹೊನ್ನೂರು ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ಬುಧವಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment