ಪಿಡಿಒ ನೇಮಕಾತಿ, ಶಿವಮೊಗ್ಗದಲ್ಲಿ ಇವತ್ತಿನಿಂದ ಎರಡು ದಿನ ಬಿಗಿ ಭದ್ರತೆಯಲ್ಲಿ ಪರೀಕ್ಷೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS, 7 DECEMBER 2024

ಶಿವಮೊಗ್ಗ : ಕರ್ನಾಟಕ ಲೋಕಸೇವಾ ಆಯೋಗದಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 150 ಹುದ್ದೆಗಳ ನೇಮಕಾತಿಗಾಗಿ ಡಿ.7ರಂದು ಜಿಲ್ಲೆಯ 34 ಕೇಂದ್ರಗಳಲ್ಲಿ ಹಾಗೂ 8ರಂದು 41 ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ (Exam) ನಡೆಸಲಾಗುವುದು ಎಂದು ಎಡಿಸಿ ಸಿದ್ದಲಿಂಗರೆಡ್ಡಿ ಹೇಳಿದರು. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಪೂರ್ವಸಿದ್ಧತೆ ಸಭೆ ನಡೆಸಿದ ಅವರು, 2 ದಿನ ನಡೆಯುವ ಪರೀಕ್ಷೆಗಳಲ್ಲಿ ಯಾವುದೇ ಅಕ್ರಮ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ಹಾಗೂ ಪರೀಕ್ಷಾ ಕೇಂದ್ರಗಳ ಮೇಲುಸ್ತುವಾರಿಗಾಗಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳನ್ನು ಮಾರ್ಗಾಧಿಕಾರಿಗಳಾಗಿ ಹಾಗೂ ವೀಕ್ಷಕರನ್ನಾಗಿ ನಿಯೋಜಿಸಲಾಗಿದೆ ಎಂದರು.

ಡಿ.7ರಂದು ಮಧ್ಯಾಹ್ನ 2 ರಿಂದ 4ರವರೆಗೆ ಕನ್ನಡ ಭಾಷಾ ಪರೀಕ್ಷೆ, ಡಿ.8ರಂದು ಬೆಳಗ್ಗೆ 10 ರಿಂದ 11.30ರವರೆಗಿನ ಮೊದಲ ಅಧಿವೇಶನದಲ್ಲಿ ಸಾಮಾನ್ಯ ಜ್ಞಾನ ಮತ್ತು ಮಧ್ಯಾಹ್ನ 2ರಿಂದ 4ರವರೆಗೆ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಮತ್ತು ಕಂಪ್ಯೂಟ‌ರ್ ಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿವೆ ಎಂದರು.

Shimoga-ADC-Siddalinga-reddy-meeting-about-pdo-exam.

ಪರೀಕ್ಷಾ ಅವಧಿಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿ ಕೇಂದ್ರಗಳಿಗೂ ಪೊಲೀಸ್ ಸಿಬ್ಬಂದಿ ನಿಯೋಜಿಸಲು ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಶೌಚಗೃಹ, ಕುಡಿಯುವ ನೀರು, ಪ್ರತಿ ಕೊಠಡಿಯಲ್ಲಿ ಶುದ್ಧ ಗಾಳಿ, ಬೆಳಕು, ಗೋಡೆ ಗಡಿಯಾರ ಇರುವಂತೆ ನೋಡಿಕೊಳ್ಳಲು ಮತ್ತು ಜಾಮರ್ ಅಳವಡಿಸುವುದು. ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗಳಿಗೆ ಸಿಸಿ ಕ್ಯಾಮರಾ ಅಳವಡಿಸುವಂತೆ ಮೇಲ್ವಿಚಾರಕರಿಗೆ ಸೂಚಿಸಲಾಗಿದೆ ಎಂದರು.

ಸಭೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ನೋಡಲ್‌ ಅಧಿಕಾರಿ ರೂಪಾ, ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು, ಮೇಲ್ವಿಚಾರಕರು, ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಹೆಚ್ಚಿದ ಧಗೆ, ಇವತ್ತು ಎಲ್ಲೆಲ್ಲಿ ಹೇಗಿರುತ್ತೆ ವಾತಾವರಣ?

Leave a Comment