ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 9 DECEMBER 2024
ಶಿವಮೊಗ್ಗ : ಸೋಗಾನೆ ವಿಮಾನ ನಿಲ್ದಾಣದಲ್ಲಿ ಇವತ್ತು ರಕ್ಷಣ ಇಲಾಖೆ ಮತ್ತು ಅಗ್ನಿಶಾಮಕ ಸಿಬ್ಬಂದಿ ತುರ್ತು ಸಂದರ್ಭದ ರಕ್ಷಣ ಕಾರ್ಯಗಳ ಅಣಕು ಪ್ರದರ್ಶನ (Mock Drill) ಮಾಡಿದರು.
ಬೆಳಗ್ಗೆ 10.19ರ ಹೊತ್ತಿಗೆ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡದ ಅಣಕು ಪ್ರದರ್ಶನ ನಡೆಯಿತು. ವಿಮಾನವೊಂದು ಅಪಘಾತಕ್ಕೀಡಾದ ಸಂದರ್ಭ ಸೃಷ್ಟಿಸಿ ಎಟಿಸಿ, ಅಗ್ನಿಶಾಮಕ ಸಿಬ್ಬಂದಿ, ರಕ್ಷಣಾ ಇಲಾಖೆ, ಆರೋಗ್ಯ ಇಲಾಖೆ ಸಿಬ್ಬಂದಿ ತುರ್ತಾಗಿ ರಕ್ಷಣಾ ಕಾರ್ಯಕ್ಕೆ ಧಾವಿಸಿದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವುದು, ಆರೋಗ್ಯ ಇಲಾಖೆ ಸಿಬ್ಬಂದಿ ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡುವ ಅಣಕು ಪ್ರದರ್ಶನ ಮಾಡಲಾಯಿತು.
ವಿಮಾನ ನಿಲ್ದಾಣದ ನಿರ್ವಹಣೆ ಮಾಡುತ್ತಿರುವ ಕೆಎಸ್‌ಎಸ್‌ಐಡಿಸಿ, ಭದ್ರತಾ ಉಸ್ತುವಾರಿ ಹೊತ್ತಿರುವ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್), ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು, ಸ್ಟಾರ್ ಏರ್, ಸ್ಪೈಸ್ ಜೆಟ್ ಮತ್ತು ಇಂಡಿಗೋ ವಿಮಾನಯಾನ ಸಿಬ್ಬಂದಿ ಅಣುಕ ಪ್ರದರ್ಶನದಲ್ಲಿ ಭಾಗವಹಿಸಿದ್ದರು ಎಂದು ಕೆಎಸ್‌ಐಐಡಿಸಿ ಎಆರ್‌ಎಫ್‌ಎಫ್‌ನ ಮುಖ್ಯಸ್ಥರ ಎ.ರುದ್ರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಿಂದ ಯಾವೆಲ್ಲ ವಿಮಾನ ಎಷ್ಟೊತ್ತಿಗೆ ಹೊರಡುತ್ತವೆ? ಇಲ್ಲಿದೆ ಟೈಮ್ ಟೇಬಲ್
ಎಲ್ಲ ವಿಮಾನ ನಿಲ್ದಾಣದಲ್ಲಿ ವರ್ಷಕ್ಕೆ ಒಮ್ಮೆ ಇಂತಹ ಅಣಕು ಪ್ರದರ್ಶನ ಮಾಡಬೇಕು ಎಂಬ ನಿಯಮವಿದೆ. ಅಣಕು ಪ್ರದರ್ಶನದ ವರದಿಯನ್ನು ನಾಗರಿಕ ವಿಮಾಯಾನ ಪ್ರಾಧಿಕಾರಕ್ಕೆ (ಡಿಜಿಸಿಎ) ವರದಿ ಸಲ್ಲಿಸಲಾಗುತ್ತದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422