SHIVAMOGGA LIVE NEWS, 13 DECEMBER 2024
ನವದೆಹಲಿ : ಶಿವಮೊಗ್ಗದಿಂದ ಮೈಸೂರು ಜಿಲ್ಲೆಗೆ ಪ್ರತಿದಿನ ರಾತ್ರಿ ಅರಸೀಕೆರೆ-ಹಾಸನ-ಕೆ.ಆರ್.ನಗರ ಮಾರ್ಗವಾಗಿ ನೂತನ ರೈಲ್ವೆ (Train) ಸಂಪರ್ಕ ಒದಗಿಸುವಂತೆ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮನವಿ ಮಾಡಿದರು. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ದೆಹಲಿಯ ಅವರ ಅಧಿಕೃತ ಕಚೇರಿಯಲ್ಲಿ ಭೇಟಿ ಮಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈಲ್ವೆ ಇಲಾಖೆಯಿಂದ ನಡೆಯುತ್ತಿರುವ ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ ಹಾಗೂ ಶಿವಮೊಗ್ಗ- ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲ್ವೆ ಮಾರ್ಗದ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸೂಪರ್ ಮಾರ್ಕೆಟ್‌ಗಳ ಟ್ರೆಂಡ್ ಜೋರು, ನಿತ್ಯ ಸಾವಿರ ಸಾವಿರ ಗ್ರಾಹಕರು, ಕಾರಣವೇನು?
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ನಿಗದಿತ ವೇಳೆಯಲ್ಲಿ ಮುಗಿಸಿಕೊಡಲು ಸೂಕ್ತ ನಿರ್ದೇಶನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ರಾಘವೇಂದ್ರ ಹೇಳಿದ್ದಾರೆ.