ಬಸ್‌ ಪಲ್ಟಿ, ಸಾಗರದಲ್ಲಿ ಯಾರೆಲ್ಲ ಹೇಗೆಲ್ಲ ನೆರವಾದರು? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 16 DECEMBER 2024

ಸಾಗರ : ಜೋಗ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್‌ (Bus) ಪಲ್ಟಿಯಾಗಿ ಮಂಗಳೂರಿನ ಪ್ರವಾಸಿಗರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಅರಲಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಪ್ಪಾನೆ ತಿರುವಿನಲ್ಲಿ ಭಾನುವಾರ ಘಟನೆ ನಡೆದಿದೆ.

ಅಪಘಾತದ ನಂತರ ಏನೇನಾಯ್ತು? ಇಲ್ಲಿದೆ ಪಾಯಿಂಟ್ಸ್‌

ದೇವರ ದರ್ಶನಕ್ಕೆ ಹೊರಟಿದ್ದರು

ಮಂಗಳೂರಿನ ಬಿ.ಸಿ. ರಸ್ತೆ ಸುತ್ತಮುತ್ತಲ 49 ಪ್ರವಾಸಿಗರು ಜೋಗ ಪ್ರವಾಸ ಕೈಗೊಂಡಿದ್ದರು. ಅಲ್ಲಿಂದ ವಡನಬೈಲು ಪದ್ಮಾವತಿ ದೇಗುಲ, ಸಿಗಂದೂರು ದೇವಸ್ಥಾನಕ್ಕೆ ತೆರಳುವವರಿದ್ದರು. ಮುಪ್ಪಾನೆ ಬಳಿ ತಿರುವಿನಲ್ಲಿ ಬಸ್‌ ಪಲ್ಟಿಯಾಗಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು ಹಲವರು ಗಾಯಗೊಂಡಿದ್ದಾರೆ. ಇಬ್ಬರ ಕೈ ತುಂಡಾಗಿದೆ.

Muppane-bus-incident

ತಕ್ಷಣ ನೆರವಿಗೆ ಧಾವಿಸಿದ ಸ್ಥಳೀಯರು

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದ್ದರು. ಸುತ್ತಮುತ್ತಲ ನಿವಾಸಿಗಳು ಗಾಯಾಳುಗಳನ್ನು ಬಸ್ಸಿನಿಂದ ಹೊರ ತೆಗೆದಿದ್ದಾರೆ. ‌ಅಪಘಾತವಾದ ಸ್ಥಳದಲ್ಲಿ ನೆಟ್‌ವರ್ಕ್‌ ಸಿಗುವುದಿಲ್ಲ. ಹಾಗಿದ್ದೂ ಸ್ಥಳೀಯರು, ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟು ಮಾಹಿತಿ ರವಾನಿಸಿದ್ದರು. ಖಾಸಗಿ ವಾಹನಗಳು, ಆಂಬುಲೆನ್ಸ್‌ಗಳ ಮೂಲಕ ಕಾರ್ಗಲ್‌ ಆಸ್ಪತ್ರೆ ಮತ್ತು ಸಾಗರ ಉಪ ವಿಭಾಗೀಯ ಆಸ್ಪತ್ರೆಗಳಿಗೆ ರವಾನಿಸಿದ್ದಾರೆ. ಗಾಯಳುಗಳಿಗೆ ಧೈರ್ಯ ಹೇಳಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

Private-Bus-incident-at-Muppane-near-Kargal.

ಮಂಗಳೂರಿನಿಂದ ಪದ್ಮಾವತಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಒಟ್ಟು 49 ಪ್ರವಾಸಿಗರಿದ್ದೆವು. ಅಪಘಾತ ಸ್ಥಳದಲ್ಲಿ ಗ್ರಾಮಸ್ಥರು ತುಂಬಾ ನೆರವು ನೀಡಿದರು. ಶಾಸಕರು, ವೈದ್ಯರು, ಆಂಬುಲೆನ್ಸ್‌ ಸಿಬ್ಬಂದಿ, ಜನರ ಸಹಕಾರ ದೊರೆತಿದೆ.

– ಸಾಯಿ ಸೂರಜ್‌, ಪ್ರವಾಸಿಗ

RED-LINE-

ತುರ್ತು ಚಿಕಿತ್ಸೆ ನೀಡಿದ ಸಿಬ್ಬಂದಿ

ಕಾರ್ಗಲ್‌ ಮತ್ತು ಸಾಗರದ ಆಸ್ಪತ್ರೆಗಳಲ್ಲು ಗಾಯಾಳುಗಳಿಗೆ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯಿತು. ಆಂಬುಲೆನ್ಸ್‌ ಚಾಲಕರು ಮತ್ತು ಸಿಬ್ಬಂದಿ ಗಾಯಾಳುಗಳನ್ನು ತುರ್ತಾಗಿ ಆಸ್ಪತ್ರೆಗೆ ರವಾನಿಸಿದರು. ಇತ್ತ ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಸಾರ್ವಜನಿಕರು ನೆರವಿಗೆ ಧಾವಿಸಿದರು. ತುರ್ತು ಚಿಕಿತ್ಸೆ ನೀಡಿದರು.

Muppane-bus-incident Sagar Hospital

ಆಸ್ಪತ್ರೆಗೆ ಎಂಎಲ್‌ಎ ದೌಡು

ಇನ್ನು, ವಿಷಯ ತಿಳಿಯುತ್ತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಆಸ್ಪತ್ರೆಗೆ ದೌಡಾಯಿಸಿದರು. ನರ್ಸಿಂಗ್‌ ಸಿಬ್ಬಂದಿಯಂತೆ ವೈದ್ಯರಿಗೆ ನೆರವಾದರು. ಗಾಯಾಳುಗಳ ಆರೋಗ್ಯ ವಿಚಾರಿಸಿ, ಧೈರ್ಯ ಹೇಳಿದರು. ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

Muppane-bus-incident MLA Beluru Gopalakrishna

ಗಾಯಾಳುಗಳ ಪರಿಸ್ಥಿತಿ ಗಮನಿಸಿದಾಗ ಬೇಜಾರಾಗುತ್ತದೆ. ಎಲ್ಲರು ಗುಣಮುಖರಾಗಲಿ. ಗಾಯಾಳುಗಳಿಗೆ ಸೂಕ್ತ ಸಂದರ್ಭದಲ್ಲಿ ಚಿಕಿತ್ಸೆ ದೊರೆಯುವಲ್ಲಿ ಜನರು, ಸ್ವಯಂ ಸೇವಕರು, ಆಂಬುಲೆನ್ಸ್‌ ಸಿಬ್ಬಂದಿ, ವೈದ್ಯರೆಲ್ಲರು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದಾರೆ.

– ಬೇಳೂರು ಗೋಪಾಲಕೃಷ್ಣ, ಶಾಸಕ

RED-LINE-

ಬಸ್‌ ತೆರವು ಕಾರ್ಯಾಚರಣೆ

ಇನ್ನು, ಬಸ್‌ ರಸ್ತೆ ಮಧ್ಯೆ ಪಲ್ಟಿಯಾಗಿದ್ದರಿಂದ ಈ ಭಾಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಜೆಸಿಬಿ ತರಿಸಿ ಬಸ್‌ ಮೇಲೆತ್ತಲಾಯಿತು. ಕಾರ್ಗಲ್‌ ಠಾಣೆಯ ಪಿಎಸ್‌ಐ ಹೊಳೆಬಸಪ್ಪ ಹೊಳಿ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ನೆರವಾದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಧೂಳು ಹಿಡಿಯುತ್ತಿದೆ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಕಟ್ಟಡ, ಏನೆಲ್ಲ ಸಮಸ್ಯೆ ಆಗ್ತಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 16, 2024

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment