ದಿಢೀರ್‌ ಕುಸಿದು ಬಿದ್ದ ಅತಿಥಿ ಉಪನ್ಯಾಸಕಿ, ತಕ್ಷಣ ನೆರವಾದ ಡಾ. ಸರ್ಜಿ, ಆಗಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIVAMOGGA LIVE NEWS | 17 DECEMBER 2024
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಬೆಳಗಾವಿ : ಪ್ರತಿಭಟನೆ ವೇಳೆ ಕುಸಿದು ಬಿದ್ದ ಅತಿಥಿ ಉಪನ್ಯಾಸಕಿಗೆ ಡಾ. ಧನಂಜಯ ಸರ್ಜಿ ತುರ್ತು ಚಿಕಿತ್ಸೆ (Treatment) ನೀಡಿ, ತಾವೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗ ಪ್ರತಿಭಟನೆ ವೇಳೆ ಘಟನೆ ಸಂಭವಿಸಿದೆ.

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ವಿಧಾನ ಪರಿಷತ್‌ ಸದಸ್ಯ ಡಾ.ಧನಂಜಯ ಸರ್ಜಿ ಮನವಿ ಸ್ವೀಕರಿಸಿದರು. ಈ ಸಂದರ್ಭ ಅತಿಥಿ ಉಪನ್ಯಾಸಕಿಯೊಬ್ಬರು ದಿಢೀರ್‌ ಕುಸಿದು ಬಿದ್ದು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು.

Dr-Dhananjaya-Sarji-treat-guest-lecturer-at-belagavi.

ಅತಿಥಿ ಉಪನ್ಯಾಸಕಿಗೆ ಡಾ. ಧನಂಜಯ ಸರ್ಜಿ ಅವರು ತಕ್ಷಣ ಅರೈಕೆ ಮಾಡಿ, ಪ್ರಥಮ ಚಿಕಿತ್ಸೆ ನೀಡಿದರು. ತಾವೇ ಬೆಳಗಾವಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು. ಡಾ. ಧನಂಜಯ ಸರ್ಜಿ ಅವರ ಕರ್ತವ್ಯ ಪ್ರಜ್ಞೆಗೆ ಅತಿಥಿ ಉಪನ್ಯಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.

Decathlon

ಈಚೆಗೆ ಶಿವಮೊಗ್ಗದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೆಡಿಪಿ ಸಭೆ ವೇಳೆ ಐಎಎಸ್‌ ಅಧಿಕಾರಿ ಕಾವೇರಿ ಅಸ್ವಸ್ಥರಾಗಿದ್ದರು. ಆ ಸಂದರ್ಭದಲ್ಲಿಯು ಡಾ. ಧನಂಜಯ ಸರ್ಜಿ ಪ್ರಥಮ ಚಿಕಿತ್ಸೆ ನೀಡಿದ್ದರು.

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ನ್ಯೂಸ್‌ ಅಪ್‌ಡೇಟ್‌

Leave a Comment