ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 18 DECEMBER 2024
ಶಿವಮೊಗ್ಗ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಜಗದೀಶ್ ಅಲಿಯಾಸ್ ಜಗ್ಗು ಇವತ್ತು ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾನೆ (Release). ಶೂರಿಟಿ ಸಿಗುವುದು ವಿಳಂಬವಾದ ಹಿನ್ನೆಲೆ ಒಂದು ದಿನ ತಡವಾಗಿ ಜೈಲಿನಿಂದ ಹೊರ ಬಂದಿದ್ದಾನೆ. ಆತನನ್ನು ಕರೆದೊಯ್ಯಲು ಕುಟುಂಬದವರು ಜೈಲು ಬಳಿ ಆಗಮಿಸಿದ್ದರು.
ಜಗದೀಶ ಚಿತ್ರದುರ್ಗದಲ್ಲಿ ಆಟೋ ಚಾಲಕನಾಗಿದ್ದ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದೊಯ್ದ ತಂಡದಲ್ಲಿದ್ದ. ಹಾಗಾಗಿ ಪ್ರಕರಣದಲ್ಲಿ ಜಗದೀಶ್ 6ನೇ ಆರೋಪಿಯಾಗಿದ್ದಾನೆ.

ಇದನ್ನೂ ಓದಿ » ನಟ ದರ್ಶನ್ ಚಾಲಕ ಶಿವಮೊಗ್ಗ ಜೈಲಿಂದ ರಿಲೀಸ್, ಓಡೋಡಿ ಹೋಗಿ ಕಾರು ಹತ್ತಿದ ಆರೋಪಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಆರೋಪದ ಹಿನ್ನೆಲೆ ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ವರ್ಗಾಯಿಸಲಾಗಿತ್ತು. ಆಗಸ್ಟ್ 29ರಂದು ಆರೋಪಿಗಳಾದ ಜಗದೀಶ ಮತ್ತು ಲಕ್ಷ್ಮಣನನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು. ನ್ಯಾಯಾಲಯ ಜಾಮೀನು ಪ್ರಕಟಿಸಿದ ಹಿನ್ನೆಲೆ ಡಿ.17ರಂದು ಲಕ್ಷ್ಮಣ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿದ್ದ. ಶೂರಿಟಿ ಸಿಗುವುದು ತಡವಾದ ಹಿನ್ನೆಲೆ ಜಗದೀಶ್ ಇವತ್ತು ರಿಲೀಸ್ ಆಗಿದ್ದಾನೆ.

ಇದನ್ನೂ ಓದಿ » ಕಚೇರಿಗೆ ಬಂದ ಪತ್ರ ಓದಿದ ಅಧಿಕಾರಿಗೆ ಕಾದಿತ್ತು ಶಾಕ್, ಏನಿತ್ತು ಲೆಟರ್‌ನಲ್ಲಿ?
LATEST NEWS
- ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್, ಏನಿದು ಪ್ರಕರಣ?

- ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್ ಆರೋಪ, ಕಾಲೇಜು ಮುಂದೆ ಆಕ್ರೋಶ

- ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್, ಈತನ ಮೇಲಿವೆ 11 ಕೇಸ್, ಏನೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

About The Editor
ನಿತಿನ್ ಆರ್.ಕೈದೊಟ್ಲು















