ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 19 DECEMBER 2024
ಭದ್ರಾವತಿ : ಆಂಧ್ರದ ಶ್ರೀ ಶೈಲದಲ್ಲಿ ದೇವರ ದರ್ಶನಕ್ಕೆ ತೆರಳಿದ್ದ ನಿವೃತ್ತ ಪ್ರಾಂಶುಪಾಲರೊಬ್ಬರ ಮನೆಯಲ್ಲಿ ಚಿನ್ನಾಭರಣ (Gold) ಕಳ್ಳತನವಾಗಿದೆ. ಭದ್ರಾವತಿ ಹೊಸಮನೆಯ ಕೇಶವಾಪುರ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ.
ಮನೆಯವರೆಲ್ಲ ಶೀಶೈಲಕ್ಕೆ ತೆರಳಿ ಹಿಂತಿರುಗಿದಾಗ ಮನೆಯ ಬಾಗಿಲಿನ ಇಂಟರ್ ಲಾಕ್ ಮುರಿದು ಕಳ್ಳತನ ಮಾಡಿರುವುದು ಗೊತ್ತಾಗಿದೆ. ಕಬೋರ್ಡ್ ಮತ್ತು ಬೀರುವಿನಲ್ಲಿಟ್ಟಿದ್ದ 15 ಸಾವಿರ ರೂ. ನಗದು, 87 ಗ್ರಾಂ ತೂಕದ ಚಿನ್ನಾಭರಣ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಒಟ್ಟು 4.35 ಲಕ್ಷ ರೂ. ಮೌಲ್ಯದ ವಸ್ತುಗಳು ಕಳುವಾಗಿದೆ ಎಂದು ಮನೆ ಮಾಲೀಕ ಗೋಪಾಲ ರಾವ್ ದೂರಿನಲ್ಲಿ ತಿಳಿಸಿದ್ದಾರೆ. ಹೊಸಮನೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಸಿಗಂದೂರು ಸೇತುವೆ ಬಹುತೇಕ ಪೂರ್ಣ, ಡ್ರೋಣ್ ಫೋಟೊ ವೈರಲ್
LATEST NEWS
- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

About The Editor
ನಿತಿನ್ ಆರ್.ಕೈದೊಟ್ಲು
















