ಸಾಗರದಲ್ಲಿ ಹೆದ್ದಾರಿಗೆ ಅಡ್ಡಲಾಗಿ ಕುಳಿತು ವಿದ್ಯಾರ್ಥಿಗಳು, ಗ್ರಾಮಸ್ಥರ ಆಕ್ರೋಶ, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS, 19 DECEMBER 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಾಗರ : ಕೆಎಸ್ಆರ್‌ಟಿಸಿ ಬಸ್ (Bus) ನಿಲುಗಡೆ ಮಾಡದೆ ಇರುವುದನ್ನು ಖಂಡಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳು ರಸ್ತೆತಡೆ ನಡೆಸಿ ಪ್ರತಿಭಟಿಸಿದರು. ಸಾಗರ ತಾಲೂಕು ತಾಲ್ಲೂಕಿನ ಕಾನ್ಲೆ ಮಾರ್ಗದಲ್ಲಿ ಸಾಗರಕ್ಕೆ ಸಂಚರಿಸುವ ಬಸ್‌ಗಳು ನಿಲುಗಡೆ ನೀಡದಿರುವುದಕ್ಕೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಿಂದ ಕಾನ್ಲೆ ಮಾರ್ಗವಾಗಿ ಸಾಗರಕ್ಕೆ ಸಂಚರಿಸುವ ಕೆಎಸ್ಆರ್‌ಟಿಸಿ ಬಸ್‌ಗಳನ್ನು ಎಲ್ಲಾ ಕಡೆ ನಿಲುಗಡೆ ಮಾಡಬೇಕು. ಈ ಬಸ್‌ನಲ್ಲಿ ವಿದ್ಯಾರ್ಥಿಗಳು ಸಿರಿವಂತೆ, ಸಾಗರದ ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ಬಸ್ ನಿಲುಗಡೆ ಮಾಡದೆ ಇರುವುದರಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಲಾಗಿದೆ. ಆದರೂ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಕಾರರು ದೂರಿದರು.

protest-for-ksrtc-bus-at-kanle-in-sagara.

ಇದನ್ನೂ ಓದಿ » ಆನಂದಪುರದಲ್ಲಿ ಎಲ್‌ಇಡಿ ಟಿವಿ, ಹೋಂ ಥಿಯೇಟರ್‌ ಕಳ್ಳತನ, ಹೇಗಾಯ್ತು ಘಟನೆ?

‌ಸ್ಥಳಕ್ಕೆ ಬಂದ ಕೆಎಸ್ಆರ್‌ಟಿಸಿ ಅಧಿಕಾರಿಗಳು ಬಸ್ ನಿಲುಗಡೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.

protest-for-ksrtc-bus-at-kanle-in-sagara.

ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅಶೋಕ್ ಬರದವಳ್ಳಿ, ಪ್ರಮುಖರಾದ ತುಕಾರಾಮ್ ಶಿರವಾಳ, ಶಿವಮೂರ್ತಿ ಮಂಡಗಳಲೆ, ಅಣ್ಣಪ್ಪ ಕಾನ್ಲೆ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ » ದೇವರ ದರ್ಶನ ಮುಗಿಸಿ ಭದ್ರಾವತಿಯಲ್ಲಿ ಮನೆಗೆ ಮರಳಿದ ಕುಟುಂಬಕ್ಕೆ ಕಾದಿತ್ತು ಶಾಕ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment