ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 19 DECEMBER 2024
ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ (Bakery) ಘಟಕದಲ್ಲಿ ಜನವರಿ 6 ರಿಂದ ಫೆಬ್ರವರಿ 4ರವರೆಗೆ 30 ದಿನಗಳು ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ ಆಯೋಜಿಸಿದೆ.
ತರಬೇತಿಯಲ್ಲಿ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ಕೋಕೋನಟ್ ಕುಕಿಸ್, ಕೋಕೋನಟ್ ಬಿಸ್ಕತ್, ಮಸಾಲ ಬಿಸ್ಕತ್, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್, ಪೀನಟ್ ಕುಕಿಸ್, ವೆನಿಲಾ ಬಟನ್, ಬನಾನಾ ಕೇಕ್, ಕೋಕೊನಟ್ ಕ್ಯಾಸಲ್ಸ, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಬ್ಲಾಕ್ ಫಾರೆಸ್ಟ್ ಕೇಕ್, ಸ್ವಿಸ್ ರೋಲ್, ಜೆಲ್ ಕೇಕ್, ಬಟರ್ ಐಸಿಂಗ್, ಮಸಾಲಾ ಡೋನಟ್, ಮಿಲ್ಕ್ ಬ್ರೆಡ್, ಬ್ರೌನಬ್ರೆಡ್, ಫಿಜ್ಜಾ, ಪಪ್ ಪೇಸ್ಟ್ರೀ, ಡ್ಯಾನಿಷ್ ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಉತ್ಪನ್ನಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು.
ಇದನ್ನೂ ಓದಿ » ಸಿಗಂದೂರು ಸೇತುವೆ ಬಹುತೇಕ ಪೂರ್ಣ, ಡ್ರೋಣ್ ಫೋಟೊ ವೈರಲ್
ಈ ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವವರು ಜ.2ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಹೆಸರು ನೋಂದಾಯಿಸಲು ಡಾ. ಜಯಶ್ರೀ ಎಸ್.- ಮೊ. 9449187763, ಜಯಶಂಕರ- ಮೊ. 9686555897 ಸಂಪರ್ಕಿಸಬೇಕು. ನೇರವಾಗಿಯ ತೆರಳಿ ಹೆಸರು ನೋಂದಾಯಿಸಬಹುದು. ತರಬೇತಿ ಶುಲ್ಕ 3500 ರೂ. ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422