ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 25 DECEMBER 2024
ಶಿವಮೊಗ್ಗ : ಬಸ್ ಹತ್ತುವಾಗ ಮಹಿಳೆಯೊಬ್ಬರ ಕೊರಳಲ್ಲಿದ್ದ ಮಾಂಗಲ್ಯ ಸರ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ KSRTC ಬಸ್ ನಿಲ್ದಾಣದಲ್ಲಿ ಶಿಕಾರಿಪುರದ ನಾಗರತ್ನ ಎಂಬುವವರ ಮಾಂಗಲ್ಯ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಅಪ್ಡೇಟ್ ನೀಡಿದ ಸಂಸದ
ನಾಗರತ್ನ ತಮ್ಮ ಪತಿಯೊಂದಿಗೆ ಶಿವಮೊಗ್ಗದ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಮುಗಿಸಿ ಊರಿಗೆ ತೆರಳುತ್ತಿದ್ದರು. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಿಕಾರಿಪುರ ಪ್ಲಾಟ್ಫಾರಂನಲ್ಲಿ ಬಸ್ ಹುತ್ತುವಾಗ ಜನ ದಟ್ಟಣೆ ಹೆಚ್ಚಿತ್ತು. ಈ ಸಂದರ್ಭ ಕೊರಳಲ್ಲಿದ್ದ ಮಾಂಗಲ್ಯ ಸರ ಕಳವು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. 35 ಗ್ರಾಂ ತೂಕದ ಸುಮಾರು 1.22 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ಕಳುವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೂರು ದಿನ ಶ್ರೀರಾಮನ ಆದರ್ಶ ಕುರಿತು ಅನುಗ್ರಹ ಸಂದೇಶ
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






