ಕೊಡಚಾದ್ರಿ ಸಮೀಪ ಮುಖಾಮುಖಿ ಡಿಕ್ಕಿಯಾದ ಟಿಟಿ, ಜೀಪ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 25 DECEMBER 2024

ಹೊಸನಗರ : ಕೊಡಚಾದ್ರಿ (Kodachadri) ಸಮೀಪ ಜೀಪ್‌ ಮತ್ತು ಟೆಂಪೊ ಟ್ರಾವಲರ್‌ ಡಿಕ್ಕಿಯಾಗಿದ್ದು 8 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಹೊಸನಗರ ತಾಲೂಕು ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್‌, ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿ.ಟಿ. ವಾಹನ ಮುಖಾಮುಖಿ ಡಿಕ್ಕಿಯಾಗಿವೆ.

Kerala-toursit-jeepa-and-Tempo-Traveller-near-kodachadri

ಇದನ್ನೂ ಓದಿ » ಸಿಗಂದೂರು ಸೇತುವೆ, ಡ್ರೋಣ್‌ ವಿಡಿಯೋ ರಿಲೀಸ್‌, ನೋಡಲು ಇಲ್ಲಿ ಕ್ಲಿಕ್‌ ಮಾಡಿ

ಜೀಪ್‌ನಲ್ಲಿದ್ದ 8 ಮಂದಿ ಪೈಕಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಇವರೆಲ್ಲ ಕೇರಳದಿಂದ ಬಂದಿದ್ದ ಪ್ರವಾಸಿಗರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕುಂದಾಪುರದ ಆಸ್ಪತ್ರೆಗೆ ರವಾನಿಸಲಾಗಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ » ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿ ಕೊನೆಯುಸಿರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 26, 2024

Leave a Comment