ಹರಿಹರದಿಂದ ಶಿವಮೊಗ್ಗಕ್ಕೆ ಬಂದು ಬಸ್ಸಿಳಿದ ಮಹಿಳೆಗೆ ಕಾದಿತ್ತು ಶಾಕ್‌, ಆಗಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS, 1 JANUARY 2025

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ವ್ಯಾನಿಟಿ ಬ್ಯಾಗುಗಳಿಂದ ನಗದು, ಚಿನ್ನಾಭರಣ (Gold) ಕಳ್ಳತನ ಪ್ರಕರಣಗಳು ಮುಂದುವರೆದಿವೆ. ಹರಿಹರದಿಂದ ಶಿವಮೊಗ್ಗಕ್ಕೆ ಬಸ್ಸಿನಲ್ಲಿ ಬಂದಿಳಿದ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳುವಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ತಸ್ನೀಮ್‌ ಸುಲ್ತಾನಾ ಎಂಬುವವರು ಹರಿಹರದಿಂದ ಶಿವಮೊಗ್ಗಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಬಂದಿದ್ದರು. ಬಸ್‌ ಇಳಿಯುವಾಗ ಜನ ದಟ್ಟಣೆ ಹೆಚ್ಚಿತ್ತು. ಈ ಸಂದರ್ಭ ತಸ್ನೀಮ್‌ ಸುಲ್ತಾನಾ ಅವರ ವ್ಯಾನಿಟಿ ವ್ಯಾಗ್‌ನಿಂದ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ವ್ಯಾನಿಟಿ ಬ್ಯಾಗ್‌ನಲ್ಲಿದ್ದ 55 ಗ್ರಾಂ ತೂಕದ ಚಿನ್ನದ ಸರ, ಎರಡು ಚಿನ್ನದ ಉಂಗುರ, 7 ಸಾವಿರ ರೂ. ನಗದು, ಎಟಿಎಂ ಕಾರ್ಡ್‌ ಕಳ್ಳತನವಾಗಿದೆ.

KSRTC-Bus-Stand-Shivamogga

ಒಟ್ಟು 2.24 ಲಕ್ಷ ರೂ. ಮೌಲ್ಯದ ವಸ್ತುಗಳು ಕಳುವಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Web-Design-by-New-Web-techy

ಇದನ್ನೂ ಓದಿ » ಕಾರು, ಬೈಕ್‌ ಅಪಘಾತದ CCTV ದೃಶ್ಯ ಲಭ್ಯ, ಹೇಗಾಯ್ತು ಘಟನೆ? ಏನೇನೆಲ್ಲ ಆಯ್ತು?

Leave a Comment