ಹೆಚ್‌.ಟಿ.ಬಳಿಗಾರ್‌ ಇನ್ನಿಲ್ಲ, ಇಲ್ಲಿದೆ ಅವರ ಕುರಿತ ಪ್ರಮುಖಾಂಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 3 JANUARY 2024

ಬೆಂಗಳೂರು : ನಿವೃತ್ತ ಕೆಎಎಸ್ ಅಧಿಕಾರಿ, ರಾಜ್ಯ ಉಗ್ರಾಣ ನಿಗಮದ ಮಾಜಿ ಅಧ್ಯಕ್ಷ ಹೆಚ್‌.ಟಿ. ಬಳಿಗಾರ್ (62) ಗುರುವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ ಆಸ್ಪತ್ರೆಗೆ (Hospital) ದಾಖಲಾಗಿದ್ದ ಬಳಿಗಾರ್‌ ಅವರು ಅಲ್ಲಿಯೇ ನಿಧನರಾಗಿದ್ದಾರೆ.

ಇತ್ತೀಚೆಗಷ್ಟೇ ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿದ್ದರು. ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ಹೋಗಿದ್ದ ಸಂದರ್ಭ ಅಲ್ಲಿಯೇ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಇಬ್ಬರು ಹೆಣ್ಣುಮಕ್ಕಳು ಇದ್ದಾರೆ.

HT-Baligar-no-more.

ಬಳಿಗಾರ್‌ ಬಗ್ಗೆ ಗೊತ್ತಿರಬೇಕಾದ ಪ್ರಮುಖಾಂಶ

#f1f1f1 POINT-1-jpg.webp

ವಾಲ್ಮೀಕಿ ಸಮುದಾಯದ ಮುಖಂಡರಾಗಿದ್ದ ಬಳಿಗಾರ್, ತಾಲ್ಲೂಕಿನ ಮತ್ತಿಕೋಟೆ ಗ್ರಾಮದವರಾಗಿದ್ದಾರೆ. ಕೆಎಎಸ್ ಅಧಿಕಾರಿಯಾಗಿದ್ದ ಅವರು ಹುದ್ದೆಗೆ ರಾಜೀನಾಮೆ ನೀಡಿ ತಾಲ್ಲೂಕಿಗೆ ಬಂದು ರಾಜಕೀಯ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದರು. 

#f1f1f1 POINT-2-jpg.webp

ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪ ಅವರ ಆಪ್ತರಾಗಿದ್ದ ಬಳಿಗಾರ್ ಕಾಂಗ್ರೆಸ್, ಜೆಡಿಎಸ್‌ನಲ್ಲಿ ಸಕ್ರಿಯವಾಗಿದ್ದರು. ಶಿಕಾರಿಪುರ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎರಡು ಬಾರಿ ಜೆಡಿಎಸ್‌ನಿಂದ ಕಣಕ್ಕಿಳಿದು ಪರಾಭವಗೊಂಡಿದ್ದರು.

HT Baligar joins bjp

#f1f1f1 POINT-3-jpg.webp

ಅಚ್ಚರಿಯ ಬೆಳವಣಿಗೆಯಲ್ಲಿ 2022ರ ನವೆಂಬರ್‌ನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದರು.

#f1f1f1 POINT 4

ಶಿಕಾರಿಪುರ ಏತ ನೀರಾವರಿ ಯೋಜನೆ ಜಾರಿ ಸೇರಿದಂತೆ, ತಾಲೂಕಿನ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ್ದರು. ತಾಲೂಕಿನಲ್ಲಿ ಪ್ರಭಾವ ಬೆಳೆಸಿಕೊಂಡಿದ್ದರು.

RED-LINE-

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನನ್ಯ ಸೇವೆ ಸಲ್ಲಿಸಿ, ಶಿಕಾರಿಪುರ ಕ್ಷೇತ್ರದಲ್ಲಿ 2 ಬಾರಿ ಸ್ಪರ್ಧಿಸಿದ್ದ ಸಾಮಾಜಿಕ ಕಳಕಳಿಯುಳ್ಳ ಸರಳ ವ್ಯಕ್ತಿತ್ವದ ಬಳಿಗಾರ್ ಅವರು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ವಾಲ್ಮೀಕಿ ಸಮುದಾಯವನ್ನು ಸಂಘಟಿಸುವಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು, ಶಿಕಾರಿಪುರದಲ್ಲಿ ಪಕ್ಷ ಸಂಘಟನೆಗೆ ತಮ್ಮದೇ ಆದ ಮಹತ್ವದ ಕೊಡುಗೆ ನೀಡಿದ್ದಾರೆ.

– ಬಿ.ವೈ.ವಿಜಯೇಂದ್ರ, ಶಿಕಾರಿಪುರ ಶಾಸಕ

BLUE-LINE

ಇದನ್ನೂ ಓದಿ » ಡಾ. ಧನಂಜಯ ಸರ್ಜಿ ಹೆಸರು ಬಳಸಿ ವಿಷಯುಕ್ತ ಸ್ವೀಟ್‌ ಬಾಕ್ಸ್‌ ರವಾನೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment