ಶಿವಮೊಗ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 4 JANUARY 2024

ಶಿವಮೊಗ್ಗ : ರಾಜ್ಯದಲ್ಲಿ ಬಾಣಂತಿಯರು ಮತ್ತು ನವಜಾತ ಶಿಶುಗಳ ಸರಣಿ ಸಾವು ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಪ್ರತಿಭಟನೆ (Protest) ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಸಿದರು.

ರಾಜ್ಯದಲ್ಲಿ ಕಳೆದ 6 ತಿಂಗಳಿಂದ ಈಚೆಗೆ 700ಕ್ಕೂ ಹೆಚ್ಚು ಬಾಣಂತಿಯರು, ಸಾವಿರಕ್ಕೂ ಹೆಚ್ಚು ನವಜಾತ ಶಿಶುಗಳು ಸಾವನ್ನಪ್ಪಿವೆ. ರಾಜ್ಯ ಸರ್ಕಾರ ವ್ಯಾಪಕ ಭ್ರಷ್ಟಾಚಾರ ಮತ್ತು ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ ಎಂದು ಮಹಿಳಾ ಮೋರ್ಚಾ ಕಾರ್ಯಕರ್ತರು ಆರೋಪಿಸಿದರು.

BJP-President-BY-Vijayendra-protest-in-front-of-Shimoga-dc-office

ಯಾರೆಲ್ಲ ಏನೆಲ್ಲ ಮಾತನಾಡಿದರು?

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ನಂತರ ರಾಜ್ಯಕ್ಕೆ ಗ್ರಹಣ ಹಿಡಿದಿದೆ. ಅಭಿವೃದ್ಧಿ ಶೂನ್ಯವಾಗಿದೆ. ಐದು ಗ್ಯಾರಂಟಿಗಳಿಂದ ಜನ ನೆಮ್ಮದಿಯಾಗಿ ಇದ್ದಾರೆ. ಉತ್ತಮ ಆಡಳಿತ ನೀಡುತ್ತಿದ್ದೇವೆ ಎಂಬ ಭ್ರಮೆಯಲ್ಲಿ ಇದ್ದಾರೆ. ಸರ್ಕಾರದ ನಿರ್ಲಕ್ಷ್ಯಕ್ಕೆ 700ಕ್ಕೂ ಹೆಚ್ಚು ಬಾಣಂತಿಯರು ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ, ಆರೋಗ್ಯ ಸಚಿವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ತಮಗಿದು ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ.

ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

BJP Protest - BY Vijayendra

ಬಾಣಂತಿಯರ ಸರಣಿ ಸಾವು ನಮ್ಮ ರಾಜ್ಯದ ಆರ್ಥಿಕ ಸ್ಥಿತಿಯನ್ನು ತೋರುತ್ತದೆ. ಆರೋಗ್ಯ ಸಚಿವರೆ ಇದಕ್ಕೆ ನೇರ ಹೊಣೆಗಾರರಾಗಿರುತ್ತಾರೆ. ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕು. ಅನಾಥ ಮಕ್ಕಳಿಗೆ 18 ವರ್ಷದವರೆಗೆ ಸೂಕ್ತ ಸೌಲಭ್ಯ ನೀಡಬೇಕು.

ಡಾ.ಧನಂಜಯ ಸರ್ಜಿ, ವಿಧಾನ ಪರಿಷತ್‌ ಸದಸ್ಯ

BJP Protest - BY Vijayendra

ಸಾವನ್ನಪ್ಪಿದ ಬಾಣಂತಿಯರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ನವಜಾತ ಶಿಶುಗಳನ್ನು ಸರ್ಕಾರ ದತ್ತು ತೆಗೆದುಕೊಂಡು ಸೌಲಭ್ಯ ನೀಡಬೇಕು.‌ ದಿನೇಶ್ ಗುಂಡೂರಾವ್ ತಕ್ಷಣ ರಾಜೀನಾಮೆ ನೀಡಬೇಕು. ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಸೂಕ್ತ ಸೌಲಭ್ಯ ನೀಡಬೇಕು.

ಗಾಯಾತ್ರಿ ದೇವಿ ಮಲ್ಲಪ್ಪ, ಮಹಿಳಾ ಮೋರ್ಚಾ ಅಧ್ಯಕ್ಷೆ

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌, ಶಾಸಕ ಎಸ್.ಎನ್.ಚನ್ನಬಸಪ್ಪ, ಪ್ರಮುಖರಾದ ಎಸ್‌.ದತ್ತಾತ್ರಿ, ಹರಿಕೃಷ್ಣ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗ ಪಾಲಿಕೆ ಸ್ಥಬ್ಧ, ಕಚೇರಿಗಳು ಬಂದ್, ನೌಕರರಿಂದ ದಿಢೀರ್‌ ಪ್ರತಿಭಟನೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 4, 2025

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment