ಹುಲಿಕಲ್‌ ಘಾಟ್‌ನಲ್ಲಿ ಪ್ರಪಾತಕ್ಕೆ ಉರುಳಿದ ಬಸ್, ಆಗಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIVAMOGGA LIVE NEWS, 7 JANUARY 2025
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಹೊಸನಗರ : ತಾಲೂಕಿನ ಹುಲಿಕಲ್ ಘಾಟ್ (Hulikal Ghat) ರಸ್ತೆ ತಿರುವಿನಲ್ಲಿ ಸಂಚರಿಸುತ್ತಿದ್ದ ಬಸ್ ಬ್ರೇಕ್ ವಿಫಲವಾಗಿ 60 ಅಡಿ ಆಳದ ಪ್ರಪಾತಕ್ಕೆ ಉರುಳಿದೆ.

ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ದುರ್ಗಾಂಬಾ ಬಸ್‌ ಭಾನುವಾರ ತಡರಾತ್ರಿ 1.45ಕ್ಕೆ ಘಾಟಿ ರಸ್ತೆಯ ಶಿವಮೊಗ್ಗ ಜಿಲ್ಲೆ ಗಡಿ ಭಾಗದ ತಿರುವಿನಲ್ಲಿ ಬ್ರೇಕ್ ವಿಫಲವಾಗಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಬಸ್ಸಿನಲ್ಲಿ 45 ಪ್ರಯಾಣಿಕರಿದ್ದರು. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

bus-mishap-at-hulikal-Ghat

ರಸ್ತೆ ಇಕ್ಕೆಲಗಳಲ್ಲಿ ತಡೆಗೋಡೆ ಇಲ್ಲ. ಪಟ್ಟಿ ತರದ ಪ್ಲೇಟ್ ಅಳವಡಿಸಲಾಗಿದ್ದು, ಇದ್ದೂ ಇಲ್ಲದಂತಾಗಿದೆ. ಇದರಿಂದ ಹೆಚ್ಚಿನ ಅಪಘಾತ ಸಂಭವಿಸುತ್ತಿವೆ. ಉತ್ತಮ ತಡೆಗೋಡೆ ಇದ್ದಿದ್ದರೆ ಅಪಘಾತ ಸಂಭವಿಸುತ್ತಿರಲಿಲ್ಲ ಎಂದು ಆರೋಪಿಸಲಾಗಿದೆ.

ಇದನ್ನು ಓದಿ » ಕನಸಿನಕಟ್ಟೆಯಲ್ಲಿ ವಿದ್ಯುತ್‌ ಶಾಕ್‌ಗೆ ಯುವಕ ಸಾವು, ಹೇಗಾಯ್ತು ಘಟನೆ?

Leave a Comment