ಶಿವಮೊಗ್ಗ, ಸಾಗರಕ್ಕೆ ನಾಳೆ ಕೇಂದ್ರ ಸಚಿವರ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 16 JANUARY 2025

ಶಿವಮೊಗ್ಗ : ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ (Minister) ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಶಿವಮೊಗ್ಗ ಮತ್ತು ಸಾಗರಕ್ಕೆ ಭೇಟಿ ನೀಡುತ್ತಿದ್ದಾರೆ. ಜ.18ರಂದು ಅವರು ಶಿವಮೊಗ್ಗ ಮತ್ತು ಸಾಗರದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಜ.18ರಂದು ಬೆಳಗ್ಗೆ 9.35ಕ್ಕೆ ಬೆಂಗಳೂರಿನ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ಹೊರಟು ಬೆಳಗ್ಗೆ 10.50ಕ್ಕೆ ಪಿಇಎಸ್‌ ಕಾಲೇಜು ಆವರಣಕ್ಕೆ ತಲುಪಲಿದ್ದಾರೆ. ಪಿಇಎಸ್‌ ಕಾಲೇಜಿನಲ್ಲಿ ಆಯೋಜಿಸಲಾಗಿರುವ ಕೃಷಿ ಸ್ಟಾರ್ಟ್‌ಅಪ್‌ಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Shivaraj Singh chauhan

ಬೆಳಗ್ಗೆ 11.45ಕ್ಕೆ ಹೆಲಿಕಾಪ್ಟರ್‌ ಮೂಲಕ ಸಾಗರಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸಾಗರದಲ್ಲಿ ಆಯೋಜಿಸಲಾಗಿರುವ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಯಿಂದ 3.30ರವರೆಗೆ ಪಕ್ಷದ ಕಾರ್ಯಕರ್ತರು ಮತ್ತು ರೈತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಮಧ್ಯಾಹ್ನ 3.40ಕ್ಕೆ ಸಾಗರದಿಂದ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿನತ್ತ ತೆರಳಲಿದ್ದಾರೆ.

toyota-exchange-mela-

Abhishek-padavidhara-sahakara-sanga

ಇದನ್ನೂ ಓದಿ » ‘ಪೊಲೀಸರು ಕರ್ಮ ಅನುಭವಿಸುತ್ತಾರೆ, ಸರ್ಕಾರಕ್ಕೆ ಶಾಪ ತಟ್ಟುತ್ತೆʼ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment