ಶಿವಮೊಗ್ಗಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಭೇಟಿ, ಮಹತ್ವದ ಸಭೆಗಳು, ಹಲವರ ಭೇಟಿ

SHIVAMOGGA LIVE NEWS, 16 JANUARY 2025

ಶಿವಮೊಗ್ಗ : ಕನ್ನಡ ಅಭಿವೃದ್ಧಿ ಪ್ರಾಧಿಕಾರದ (Praadhikaara)ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮೂರು ದಿನ ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಸಭೆಗಳು ಮತ್ತು ಪ್ರಮುಖರನ್ನು ಭೇಟಿಯಾಗಲಿದ್ದಾರೆ. ಜ.17ರಿಂದ ಮೂರು ದಿನ ಅವರು ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ.

ಎಲ್ಲೆಲ್ಲಿಗೆ ಭೇಟಿ ನೀಡ್ತಾರೆ ಅಧ್ಯಕ್ಷರು?

ಜ.17ರಂದು ಬೆಳಗ್ಗೆ 9.30ಕ್ಕೆ ಶಿವಮೊಗ್ಗದ ಅತಿಥಿ ಗೃಹದಲ್ಲಿ ಕನ್ನಡ ಪರ ಸಂಘಟನೆಗಳ ಪ್ರಮುಖರು ಮತ್ತು ಹೋರಾಟಗಾರರ ಜೊತೆಗೆ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ, ಮಧ್ಯಾಹ್ನ 3ಕ್ಕೆ ಕುವೆಂಪು ವಿಶ್ವವಿದ್ಯಾಲಯಕ್ಕೆ ತೆರಳಲಿದ್ದಾರೆ. ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

Purushotamma Bilimale

ಜ.18ರಂದು ಬೆಳಗ್ಗೆ 9.30ಕ್ಕೆ ಶಿವಮೊಗ್ಗದಿಂದ ಕೋಣಂದೂರಿಗೆ ತೆರಳಲಿದ್ದಾರೆ. ಬೆಳಗ್ಗೆ 11.30ಕ್ಕೆ ಮಾಜಿ ಶಾಸಕ ಕೋಣಂದೂರು ಲಿಂಗಪ್ಪ ಅವರ ಮನೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಕುಪ್ಪಳಿಯಲ್ಲಿನ ರಾಷ್ಟ್ರಕವಿ ಕುವೆಂಪು ಅವರ ಮನೆಗೆ ಭೇಟಿ ನೀಡಲಿದ್ದಾರೆ. ರಾತ್ರಿ ತೀರ್ಥಹಳ್ಳಿ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಜ.19ರಂದು ಮಧ್ಯಾಹ್ನ ಕುಪ್ಪಳಿಯಿಂದ ಹೊರಟು ರಾತ್ರಿ ಬೆಂಗಳೂರು ತಲುಪಲಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಟಿ.ಎಸ್‌.ಫಣಿಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ನ್ಯೂಸ್‌

shimoga dc office

Leave a Comment