ಶಿವಮೊಗ್ಗದಲ್ಲಿ ಜ.18ರಂದು ಉಚಿತ ಆರೋಗ್ಯ ತಪಾಸಣೆ, ಏನೇನೆಲ್ಲ ಚಿಕಿತ್ಸೆ ಲಭಿಸಲಿದೆ?

SHIVAMOGGA LIVE NEWS, 17 JANUARY 2025 (ಈ ಸುದ್ದಿಯನ್ನು ಇನ್ನು 36 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಶಿವಮೊಗ್ಗ : ನ್ಯೂ ಇಂಡಿಯನ್ ಎಕ್ಸ್ ಪ್ರೆಸ್, ಟಿಎಂಎಇಎಸ್, ಜಿಲ್ಲಾಡಳಿತ, ರಾಜ್ಯ ಪಾರಂಪರಿಕ ವೈದ್ಯ ಪರಿಷತ್ ವತಿಯಿಂದ ಆರೋಗ್ಯ ಉಚಿತ ತಪಾಸಣೆ (Health Camp) ಶಿಬಿರವನ್ನು ಜ.18ರಂದು ಸರ್ಕಾರಿ ನೌಕರರ ಭವನದಲ್ಲಿ ಬೆಳಗ್ಗೆ 10.30ರಿಂದ ಹಮ್ಮಿಕೊಳ್ಳಲಾಗಿದೆ ಎಂದು ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ನ ಹಿರಿಯ ವರದಿಗಾರ ರಾಮಚಂದ್ರ ಗುಣಾರಿ ತಿಳಿಸಿದರು.

ಆಯುರ್ವೇದ, ಪಾರಂಪರಿಕ ವೈದ್ಯ ಪದ್ದತಿ, ಹೋಮಿಯೋಪತಿ, ಯುನಾನಿ ವೈದ್ಯ ಪದ್ಧತಿಯಲ್ಲಿ ತಪಾಸಣೆ, ಚಿಕಿತ್ಸೆ ನೀಡಲಾಗುವುದು. ಸಾರ್ವಜನಿಕರು ತಮ್ಮ ಇಚ್ಚೆಯ ವೈದ್ಯ ಪದ್ಧತಿಯಲ್ಲಿ ತಪಾಸಣೆಗೆ ಒಳಗಾಗಬಹುದು. ಉಚಿತ ಔಷಧಿಯನ್ನು ನೀಡಲಾಗುವುದು ಎಂದು ತಿಳಿಸಿದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

Indian-Express-reporter-ramachandra-gunari-speaks-about-health-camp

ರಾಜ್ಯ ಪಾರಂಪರಿಕ ವೈದ್ಯ ಪರಿಷತ್‌ನ ಅಧ್ಯಕ್ಷ ರಾಜು ಪಂಡಿತ್, ಡಾ.ಧಾತ್ರಿ ದತ್ತ, ಡಾ. ಅರ್ಪಿತಾ ಸುದ್ದಿಗೋಷ್ಠಿಯಲ್ಲಿದ್ದರು.

ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣ ಕುರಿತು ಸಚಿವ ಎಂ.ಬಿ.ಪಾಟೀಲ್‌ ಮಹತ್ವದ ಹೇಳಿಕೆ, ಏನಂದ್ರು?

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Indian-Express-reporter-ramachandra-gunari-speaks-about-health-camp

Leave a Comment