ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ, ದಿನಾಂಕ ಪ್ರಕಟ

SHIVAMOGGA LIVE NEWS, 17 JANUARY 2025

ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ 34 ನೇ ವಾರ್ಷಿಕ ಘಟಿಕೋತ್ಸವವು (Convocation) ಜ.22ರಂದು ನಡೆಯಲಿದೆ. ಅಂದು ಬೆಳಗ್ಗೆ 10.30ಕ್ಕೆ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‌ನ ಬಸವಸಭಾ ಭವನದಲ್ಲಿ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ.

ರಾಜ್ಯಪಾಲರು, ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಭಾಗವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಡಾ.ಎಂ.ಸಿ.ಸುಧಾಕರ್‌ ಉಪಸ್ಥಿತರಿರಲಿದ್ದಾರೆ.

Kuvempu-University

ಮುಖ್ಯ ಅತಿಥಿಗಳಾಗಿ ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಾಮ್ ರಾಮಸ್ವಾಮಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಕುಲಸಚಿವ ಎ.ಎಲ್.ಮಂಜುನಾಥ್, ಮೌಲ್ಯಮಾಪನ ಕುಲಸಚಿವ ಪ್ರೊ.ಎಸ್.ಎಂ.ಗೋಪಿನಾಥ್ ಪಾಲ್ಗೊಳ್ಳುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Kalleshwara-Enterprises.webp

ಇದನ್ನೂ ಓದಿ » ಶಿವಮೊಗ್ಗದಲ್ಲಿ ಜ.18ರಂದು ಉಚಿತ ಆರೋಗ್ಯ ತಪಾಸಣೆ, ಏನೇನೆಲ್ಲ ಚಿಕಿತ್ಸೆ ಲಭಿಸಲಿದೆ?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment