ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?

SHIVAMOGGA LIVE NEWS, 20 JANUARY 2024

ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ (Kuvempu University) 34ನೇ ಘಟಿಕೋತ್ಸವ ಜ.22ರಂದು ಶಂಕರಘಟ್ಟದಲ್ಲಿ ನಡೆಯಲಿದೆ. ಈ ಬಾರಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ಅವಕಾಶ ಇರಲಿದೆ. ಈ ಬಾರಿ ಮೂವರಿಗೆ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ ಎಂದರು.

ಯಾರಿಗೆಲ್ಲ ಗೌರವ ಡಾಕ್ಟರೇಟ್?

ಹಿರಿಯ ರಾಜಕಾರಣಿ ಮತ್ತು ಸಮಾಜ ಸೇವಕ ಕಾಗೋಡು ತಿಮ್ಮಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.

ಕಾಗೋಡು ತಿಮ್ಮಪ್ಪ ಅವರಿಗೆ ಈ ಮೊದಲೆ ಗೌರವ ಡಾಕ್ಟರೇಟ್ ಲಭಿಸಬೇಕಿತ್ತು. ಆದರೆ ಈಗ ಅವರ ಹೆಸರು ಆಯ್ಕೆ ಸಮಿತಿ ಮುಂದೆ ಬಂದಿದೆ. ಕಾಲೇಜು ಒಂದರ ಪ್ರಾಂಶುಪಾಲರು ಕಾಗೋಡು ತಿಮ್ಮಪ್ಪ ಅವರ ಹೆಸರು ಪ್ರಸ್ತಾಪಿಸಿದ್ದರು.

– ಪ್ರೊ.ಶರತ್ ಅನಂತಮೂರ್ತಿ, ಕುಲಪತಿ

200125 Kuvempu University and Vice chancellor Prof Sharat ananthamurthy

RED-LINE

Prashanth-Loan-Advertisement.

» ಡಿಫೆನ್ಸ್ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಯ ಪ್ರೊ. ಸಿ.ಎಸ್.ಉನ್ನೀಕೃಷ್ಣನ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಮೂಲಭೂತ ವಿಜ್ಞಾನದಲ್ಲಿ ಸಂಶೋಧನೆ ಮತ್ತು ಸಾಧನೆ ಮಾಡಿದ್ದಾರೆ.

Kuvempu University vice chancellor Prof Sharat ananthamurthy

» ಭದ್ರಾವತಿಯ ಯೋಗ ಗುರು ಡಿ.ನಾಗರಾಜ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. 33ಕ್ಕಿಂತಲು ಹೆಚ್ಚು ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಉಚಿತವಾಗಿ ಶಿಬಿರ ಮಾಡಿ, ಯೋಗ ಪ್ರಚಾರ ಮಾಡುತ್ತಿದ್ದಾರೆ.

ಕುಲಸಚಿವ ಎ‌.ಎಲ್.ಮಂಜುನಾಥ್, ಮೌಲ್ಯಮಾಪನ ಕುಲಸಚಿವ ಪ್ರೊ. ಎಸ್.ಎಂ.ಗೋಪಿನಾಥ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಸತ್ಯಪ್ರಕಾಶ್ ಸುದ್ದಿಗೋಷ್ಠಿಯಲ್ಲಿದ್ದರು.

Kalleshwara-Enterprises.webp
Kuvempu University
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment