ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 20 JANUARY 2025
ಶಿವಮೊಗ್ಗ : ಕಡೂರು ಮತ್ತು ಬೀರೂರು ನಿಲ್ದಾಣದ ಯಾರ್ಡ್‌ಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಆದ್ದರಿಂದ ವಿವಿಧ ರೈಲುಗಳನ್ನು (Train) ಭಾಗಶಃ ರದ್ದು, ಮರು ವೇಳಾಪಟ್ಟಿ ನಿಗದಿ ಮತ್ತು ನಿಯಂತ್ರಿಸಲಾಗುತ್ತಿದೆ ಎಂದು ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನವರಿ 25 ಮತ್ತು ಫೆಬ್ರವರಿ 1ರಂದು ಶಿವಮೊಗ್ಗ ಟೌನ್ – ಚಿಕ್ಕಮಗಳೂರು ಡೈಲಿ ಪ್ಯಾಸೆಂಜರ್ (ರೈಲು ಸಂಖ್ಯೆ 56271) ರೈಲು ಬೀರೂರು ಮತ್ತು ಚಿಕ್ಕಮಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಈ ರೈಲಿನ ಸೇವೆ ಬೀರೂರಿನಲ್ಲಿ ಕೊನೆಗೊಳ್ಳಲಿದೆ.ರೈಲುಗಳ ಭಾಗಶಃ ರದ್ದು

ರೈಲುಗಳ ಮರು ವೇಳಾಪಟ್ಟಿ/ನಿಯಂತ್ರಣ » ರೈಲು 1 ಜನವರಿ 21 ಮತ್ತು ಫೆಬ್ರವರಿ 4 ರಂದು ಪ್ರಾರಂಭವಾಗುವ ಅರಸೀಕೆರೆ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ 16213) ಅರಸೀಕೆರೆಯಿಂದ 75 ನಿಮಿಷ ತಡವಾಗಿ ಹೊರಡಲಿದೆ. » ರೈಲು 2 ಜನವರಿ 21 ಮತ್ತು ಫೆಬ್ರವರಿ 4 ರಂದು ಪ್ರಾರಂಭವಾಗುವ ಎಸ್ಎಸ್ಎಸ್ ಹುಬ್ಬಳ್ಳಿ-ಸೋಲಾಪುರ ಡೈಲಿ ಪ್ಯಾಸೆಂಜರ್ ರೈಲು (ರೈಲು ಸಂಖ್ಯೆ 56906) ಹುಬ್ಬಳ್ಳಿಯಿಂದ 75 ನಿಮಿಷ ತಡವಾಗಿ ಹೊರಡಲಿದೆ. » ರೈಲು 3 ಜನವರಿ 25 ಮತ್ತು ಫೆಬ್ರವರಿ 1 ರಂದು ಪ್ರಾರಂಭವಾಗುವ ಎಸ್ಎಸ್ಎಸ್ ಹುಬ್ಬಳ್ಳಿ-ಅರಸೀಕೆರೆ ಡೈಲಿ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ 16214) ಹುಬ್ಬಳ್ಳಿಯಿಂದ 75 ನಿಮಿಷ ತಡವಾಗಿ ಹೊರಡಲಿದೆ. ಮತ್ತು ಈ ರೈಲು ಮಾರ್ಗ ಮಧ್ಯ 60 ನಿಮಿಷ ನಿಯಂತ್ರಣವಾಗಲಿದೆ.
ಇದನ್ನೂ ಓದಿ » ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






