ಶಿವಮೊಗ್ಗ ಸಿಟಿಯ ಹಲವು ಕಡೆ ಜ.30ರಂದು ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ : ನಗರದ ವಿವಿಧೆಡೆ ಜ.30ರಂದು ಬೆಳಗ್ಗೆಯಿಂದ ಸಂಜೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ನಗರದ ಸಿದ್ಧಯ್ಯ ಸರ್ಕಲ್ ಮತ್ತು ಬಟ್ಟೆ ಮಾರ್ಕೆಟ್ ಬಳಿ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಜ.30ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. ಬಟ್ಟೆ ಮಾರ್ಕೆಟ್, ಕುಂಬಾರಗುಂಡಿ, ಬಿ.ಬಿ.ರಸ್ತೆ, ಗಾಂಧಿಬಜಾರ್ ಕೆಳಭಾಗ, ಮಂಜುನಾಥ ಟಾಕೀಸ್, ತಿಮ್ಮಪ್ಪನ ಕೊಪ್ಪಲು, ಸಿದ್ದಯ್ಯ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಂಡ್ಲಿ ಸುತ್ತಮುತ್ತ ವಿದ್ಯುತ್‌ ವ್ಯತ್ಯಯ

ಮಂಡ್ಲಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಇರಲಿದೆ. ಆದ್ದರಿಂದ ಜ.30ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಪುರ, ಶರಾವತಿನಗರ, ಶಾರದ ಕಾಲೋನಿ ಮತ್ತು ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.

Prashanth-Loan-Advertisement.

ಇದನ್ನೂ ಓದಿ » ಶಿವಮೊಗ್ಗ ಬಿಜೆಪಿಗೆ ನೂತನ ಜಿಲ್ಲಾಧ್ಯಕ್ಷ ಆಯ್ಕೆ, 10 ಮಂಡಲಕ್ಕೂ ಹೊಸ ಅಧ್ಯಕ್ಷರು, ಯಾರೆಲ್ಲ ಆಯ್ಕೆಯಾಗಿದ್ದಾರೆ?

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌