ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 29 JANUARY 2025
ಶಿವಮೊಗ್ಗ : ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ದಾಳಿ (Attack) ಮಾಡಿ ಗಾಯಗೊಳಿಸಿದೆ. ಶಿವಮೊಗ್ಗ ತಾಲೂಕು ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮ ಎಂಬುವವರ ಮನೆಯಲ್ಲಿ ನಡೆದಿದೆ.
ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಅದು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದೆ. ಕೂಡಲೆ ಚಿಕಿತ್ಸೆ ನೀಡಲಾಗಿದೆ.

ಎರಡು ವಾರದ ಹಿಂದೆ ಸಮೀಪದ ಗುಬ್ಬಿಗದಲ್ಲಿ ಚಿರತೆಯೊಂದು ನಾಯಿಯನ್ನು ಹೊತ್ತೊಯ್ದಿದ್ದ ದೃಶ್ಯ ಸಿ.ಸಿ.ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಿರಂತರವಾಗಿ ನಾಯಿಗಳನ್ನು ಹೊತ್ತೊಯ್ಯುತ್ತಿದ್ದ ಚಿರತೆ ಇದೀಗ ಕೊಟ್ಟಿಗೆಯಲ್ಲಿ ಕಟ್ಟಿರುವ ಜಾನುವಾರುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ನಿಮ್ಮೂರ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ

ಇದನ್ನೂ ಓದಿ » ಶಿವಮೊಗ್ಗ ಬಿಜೆಪಿಗೆ ನೂತನ ಜಿಲ್ಲಾಧ್ಯಕ್ಷ ಆಯ್ಕೆ, 10 ಮಂಡಲಕ್ಕೂ ಹೊಸ ಅಧ್ಯಕ್ಷರು, ಯಾರೆಲ್ಲ ಆಯ್ಕೆಯಾಗಿದ್ದಾರೆ?
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















