ಶಿವಮೊಗ್ಗದಲ್ಲಿ ಬಸ್‌ ಹತ್ತಿ ಕುಳಿತ ನ್ಯಾಮತಿಯ ಮಹಿಳೆಗೆ ಕಾದಿತ್ತು ಶಾಕ್‌, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 30 JANUARY 2025

ಶಿವಮೊಗ್ಗ : ಬಸ್‌ ಹತ್ತುವಾಗ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣ, ನಗದು ಕಳ್ಳತನ ಮುಂದುವರೆದಿದೆ. KSRTC ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತುವಾಗ ವ್ಯಾನಿಟಿ ಬ್ಯಾಗ್‌ನಿಂದ ಕಳ್ಳತನವಾಗಿದೆ.

ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ಸಂಬಂಧಿಯ ಆರೋಗ್ಯ ವಿಚಾರಿಸಿದ್ದ ಗೀತಾ ಎಂಬುವವರು ತಮ್ಮೂರು ನ್ಯಾಮತಿಗೆ ಹಿಂತಿರುಗುತ್ತಿದ್ದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ಟಿಕೆಟ್‌ ಮಾಡಿಸಲು ವ್ಯಾನಿಟಿ ಬ್ಯಾಗ್‌ ಗಮನಿಸಿದಾಗ ಜಿಪ್‌ ತೆರೆದಿರುವುದು ಗೊತ್ತಾಗಿದೆ. ಒಳಗಿದ್ದ ಪರ್ಸ್‌ ನಾಪತ್ತೆಯಾಗಿತ್ತು. ಅದರಲ್ಲಿ 75 ಸಾವಿರ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರ, 1500 ರೂ. ನಗದು, ವಿವಿಧೆ ಬ್ಯಾಂಕುಗಳ ಎಟಿಎಂ ಕಾರ್ಡುಗಳಿದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

KSRTC-Bus-Stand-in-Shimoga

ಬಸ್‌ ಹತ್ತುವಾಗ ಹೆಚ್ಚು ಜನ ದಟ್ಟಣೆ ಇತ್ತು. ಈ ಸಂದರ್ಭ ಕಳ್ಳರು ವ್ಯಾನಿಟಿ ಬ್ಯಾಗ್‌ ಜಿಪ್‌ ತೆಗೆದು ಕಳ್ಳತನ ಮಾಡಿದ್ದಾರೆ ಎಂದು ಗೀತಾ ಅವರು ಆರೋಪಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Web-Design-by-New-Web-techy

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಮತ್ತೆ ಎರಡು ಇಂದಿರಾ ಕ್ಯಾಂಟೀನ್‌, ಎಲ್ಲೆಲ್ಲಿ? ಯಾವಾಗ ಶುರುವಾಗುತ್ತೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment