ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಇಲ್ಲಿದೆ ಫಟಾಫಟ್‌ ನ್ಯೂಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 30 JANUARY 2024

ಫಟಾಫಟ್‌ ಸುದ್ದಿ : ಶಿವಮೊಗ್ಗ ನಗರದಲ್ಲಿ (city) ಇವತ್ತು ಏನೆಲ್ಲ ಆಯ್ತು? ಫಟಾಫಟ್‌ ಅಪ್‌ಡೇಟ್‌ ಇಲ್ಲಿದೆ.

‘ಕುವೆಂಪು ವಿವಿ ಮುಚ್ಚುವ ಹುನ್ನಾರʼ

FATAFAT - #f1f1f1ಬಿಜೆಪಿ ಕಚೇರಿ : ಉನ್ನತ ಶಿಕ್ಷಣ ಸಚಿವರ ನಿರ್ಲಕ್ಷ್ಯ, ಕುಲಪತಿ, ಕುಲಸಚಿವರ ದರ್ಪ ಗಮನಿಸಿದರೆ ಕುವೆಂಪು ವಿಶ್ವವಿದ್ಯಾಲಯವನ್ನು ಮುಚ್ಚುವ ಹುನ್ನಾರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್‌.ಅರುಣ್ ಆರೋಪಿಸಿದರು. ಸಿಂಡಿಕೇಟ್‌ ಸಭೆಗಳು ಸರಿಯಾಗಿ ನಡೆಯುತ್ತಿಲ್ಲ. ಶೈಕ್ಷಣಿಕ ಕ್ಯಾಲೆಂಡರ್‌ ಸಮರ್ಪಕವಾಗಿಲ್ಲ. ಅಗತ್ಯಕ್ಕಿಂತಲು ಹೆಚ್ಚು ಸಿಬ್ಬಂದಿ ಇದ್ದಾರೆ ಎಂದು ಆರೋಪಿಸಿದರು.

DS-Arun-Press-meet-in-Shimoga-city-about-kuvempu-university.

ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಚಾಲನೆ

FATAFAT - #f1f1f1ಪತ್ರಿಕಾ ಭವನ : ಫೆ.4ರಂದು ಸಾವೀರಾರು ಸ್ವಾಮೀಜಿಗಳ ನೇತೃತ್ವದಲ್ಲಿ ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಚಾಲನೆ ನೀಡಲಾಗುತ್ತದೆ. ಶಿವಮೊಗ್ಗದಿಂದ ರಾಷ್ಟ್ರಭಕ್ತರ ಬಳಗದ 250ಕ್ಕೂ ಹೆಚ್ಚು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

KS-Eshwarappa-with-e-vishwas.

ವಕೀಲ ಕೆ.ಪಿ.ಶ್ರೀಪಾಲ್‌ಗೆ ಸನ್ಮಾನ

FATAFAT - #f1f1f1ಪತ್ರಿಕಾ ಭವನ : ರಾಜ್ಯದಲ್ಲಿ ನಕ್ಸಲ್‌ ಶರಣಾಗತಿ ಮತ್ತು ಪುನರ್ವಸತಿಗೆ ಪ್ರಮುಖ ಪಾತ್ರ ವಹಿಸಿದ ಸಮಿತಿಯ ಪ್ರಮುಖರಾದ ವಕೀಲ ಕೆ.ಪಿ.ಶ್ರೀಪಾಲ್‌ ಅವರನ್ನು ಸೌರ್ಹಾದವೆ ಹಬ್ಬ ಬಳಗದ ವತಿಯಿಂದ ಸನ್ಮಾನಿಸಲಾಗುತ್ತಿದೆ. ಜ.31ರಂದು ಸಂಜೆ 5.30ಕ್ಕೆ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಳಗದ ರಾಜ್ಯ ಸಂಚಾಲಕ ಗುರುಮೂರ್ತಿ ತಿಳಿಸಿದರು. ಹೊನ್ನಾಳಿ ಚಂದ್ರಶೇಖರ್‌, ಅರಸಾಳು ಸುರೇಶ್‌ ಸುದ್ದಿಗೋಷ‍್ಠಿಯಲ್ಲಿದ್ದರು.

felicitation for advocate Sripal

ಖರ್ಗೆ ವಾಜಾಗೆ ಮಹಿಳೆಯರ ಆಗ್ರಹ

FATAFAT - #f1f1f1ಜಿಲ್ಲಾಧಿಕಾರಿ ಕಚೇರಿ : ಮಹಾಕುಂಭಮೇಳದ ಕುರಿತು ವ್ಯಂಗ್ಯ ಮಾಡಿರುವ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭಾ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಿತು. ಒಂದು ಜನಾಂದ ಒಲೈಕೆ, ಹೈಕಮಾಂಡ್‌ ಮೆಚ್ಚಿಸಲು ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ಕಾರ್ಯಕರ್ತೆಯರು ಆರೋಪಿಸಿದರು. ನಗರ ಅಧ್ಯಕ್ಷೆ ರಶ್ಮಿ ಶ್ರೀನಿವಾಸ್‌, ಕಾರ್ಯದರ್ಶಿ ಯಶೋದ ವೈಷ್ಣವ್‌, ಶಾಂತಾ ಸುರೇಂದ್ರ ಸೇರಿದಂತೆ ಹಲವರು ಇದ್ದರು.

BJP Mahila morcha protest against Mallikarjuna Kharge

ಚಾಲಕರಿಗೆ ಅಗೌರವ, ಪ್ರತಿಭಟನೆ

FATAFAT - #f1f1f1ಜಿಲ್ಲಾಧಿಕಾರಿ ಕಚೇರಿ : ಕರ್ಕಶ ಹಾರನ್‌ ಹೊಂದಿರುವ ಬಸ್ಸುಗಳನ್ನು ತಡೆದು ಪರಿಶೀಲಿಸುವ ಸಂದರ್ಭ ಸಂಚಾರ ಠಾಣೆ ಪಿಎಸ್‌ಐ ಚಾಲಕರೊಂದಿಗೆ ಅಗೌರವದಿಂದ ನಡೆದುಕೊಂಡಿದ್ದಾರೆ ಎಂದು ಕಟ್ಟಡ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

drivers protest against psi in Shimoga

ಗಾಂಧೀಜಿ ಪುಣ್ಯಸ್ಮರಣೆ, ಫೋಟೊಗೆ ಪುಷ್ಪನಮನ

FATAFAT - #f1f1f1ಕಾಂಗ್ರೆಸ್‌ ಕಚೇರಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು. ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಕಾಂಗ್ರೆಸ್‌ ಜಿಲ್ಲಾ‍ಧ್ಯಕ್ಷ ಆರ್‌.ಪ್ರಸನ್ನ ಕುಮಾರ್‌, ಗಾಂಧೀಜಿ ಅವರು ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅವರ ಆದರ್ಶವನ್ನು ಎಲ್ಲರು ಪಾಲಿಸಬೇಕು ಎಂದರು.

ಶಿವಮೊಗ್ಗ ಡಿಸಿಎಂ ಡಿ.ಕೆ.ಶಿವಕುಮಾರ್‌

FATAFAT - #f1f1f1ವಿಮಾನ ನಿಲ್ದಾಣ : ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಸಚಿವ ಎಂ.ಪಿ.ಪಾಟೀಲ್‌ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಪೊಲೀಸ್‌ ಇಲಾಖೆ ವತಿಯಿಂದ ಗಾರ್ಡ್‌ ಆಫ್‌ ಹಾನರ್‌ ನೀಡಲಾಯಿತು.

guard of honor for DK Shivakumar at Shimoga airport

ನೆಟ್‌ವರ್ಕ್‌ ಸಮಸ್ಯೆ ಕುರಿತು ಚರ್ಚೆ

FATAFAT - #f1f1f1ಪ್ರವಾಸಿ ಮಂದಿರ : ಸಂಸದ ಬಿ.ವೈ.ರಾಘವೇಂದ್ರ ಅಧ್ಯಕ್ಷತೆಯಲ್ಲಿ ಭಾರತೀಯ ಸಂಚಾರ ನಿಗಮ ನಿಯಮಿತ (BSNL) ಇದರ ಸಲಹಾ ಸಮಿತಿ ಸಭೆ ನಡೆಸಲಾಯಿತು. ನೆಟ್‌ವರ್ಕ್‌ ಸಮಸ್ಯೆ, ಹೊಸ ಟವರ್‌ಗಳ ಅಳವಡಿಕೆ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು. ಶಾಸಕರಾದ ಆರಗ ಜ್ಞಾನೇಂದ್ರ, ಎಸ್‌.ಎನ್‌.ಚನ್ನಬಸಪ್ಪ, ಜಿಲ್ಲಾಧಿಕಾರಿ ಗುರದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್‌ ಕುಮಾರ್‌ ಸೇರಿದಂತೆ ಹಲವರು ಇದ್ದರು.

by raghavendra holds meeting at shimoga ib

ಇದನ್ನೂ ಓದಿ » ಶಿವಮೊಗ್ಗ, ಎನ್‌.ಆರ್‌.ಪುರ, ತರೀಕೆರೆಗೆ ನಾಳೆ ಸಚಿವ ಮಧು ಬಂಗಾರಪ್ಪ ಭೇಟಿ, ಸಭೆ, ಸಮಾರಂಭದಲ್ಲಿ ಭಾಗಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 30, 2025

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment