SHIVAMOGGA LIVE NEWS, 1 FEBRUARY 2025
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶೃಂಗೇರಿ : ನಕ್ಸಲ್ ಚಳವಳಿಯಲ್ಲಿ (Naxal) ಸಕ್ರಿಯವಾಗಿದ್ದ ಕೋಟೆಹೊಂಡ ರವಿ ಅಲಿಯಾಸ್ ರವೀಂದ್ರ ನೆಮ್ಮಾರ್ ಕಳೆದ ರಾತ್ರಿ ಶೃಂಗೇರಿಯಲ್ಲಿ ಶರಣಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತದ ಎದುರು ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚೆಗಷ್ಟೆ ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಾಣಾಗಿದ್ದರು. ಆದರೆ ಕೋಟೆಹೊಂಡ ರವಿ ಮಾತ್ರ ಭೂಗತವಾಗಿದ್ದರು. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು. ಕಳೆದ ರಾತ್ರಿ ಶೃಂಗೇರಿಯ ಅರಣ್ಯ ಐಬಿಯಲ್ಲಿ ಕೋಟೆಹೊಂಡ ರವಿ ಅವರು ಶರಣಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ಹೊತ್ತಿಗೆ ಅವರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ ಎಂದು ಪ್ರಗತಿಪರ ಹೋರಾಟಗಾರ ಕೆ.ಎಲ್.ಅಶೋಕ್ ಮಾಹಿತಿ ನೀಡಿದ್ದಾರೆ.

ನಕ್ಸಲ್ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ಕೆ.ವಸಂತ, ಜಿಶಾ, ಮಾರೆಪ್ಪ ಅರೋಲಿ ಈಚೆಗೆ ಶರಣಾಗಿದ್ದರು. ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡರ ಪ್ರಯತ್ನದಿಂದ ಈಗ ಕೋಟೆಹೊಂಡ ರವಿ ಶರಣಾಗತಿಯಾಗಿದ್ದು, ರಾಜ್ಯದ ಎಲ್ಲ ನಕ್ಸಲರು ಮುಖ್ಯವಾಹಿನಿಗೆ ಬಂದಂತಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ಹೆಲ್ಪ್‌ಲೈನ್ ಶುರು, ವಾಟ್ಸಪ್‌ನಲ್ಲೇ ದಾಖಲಿಸಬಹುದು ದೂರು
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





