ಶಿವಮೊಗ್ಗದಲ್ಲಿ ನಿಂತಿದ್ದ ಬಸ್ಸಿಗೆ ಕಾರು ಡಿಕ್ಕಿ, ಶಾಹಿ ಗಾರ್ಮೆಂಟ್ಸ್‌ ಸಿಬ್ಬಂದಿ ಸಾವು

SHIVAMOGGA LIVE NEWS, 3 FEBRUARY 2025 ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ : ನಿಂತಿದ್ದ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಗಾರ್ಮೆಂಟ್ಸ್‌ (garments) ಒಂದರ ಸೀನಿಯರ್‌ ಕ್ವಾಲಿಟಿ ಮ್ಯಾನೇಜರ್‌ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆ ಭಾರ್ಗವಿ ಪೆಟ್ರೋಲ್‌ ಬಂಕ್‌ ಸಮೀಪ ಕಳೆದ ರಾತ್ರಿ ಘಟನೆ ಸಂಭವಿಸಿದೆ.

ಧಾರವಾಡ ಮೂಲದ ವಿಜಯ ಕುರ್ಲಿ (48) ಮೃತರು. ವಿನೋಬನಗರದಲ್ಲಿರುವ ಸ್ನೇಹಿತರೊಬ್ಬರ ಮನೆಯಿಂದ ವಿಜಯ ಕುರ್ಲಿ ಮಲವಗೊಪ್ಪದ ಶಾಹಿ ಗಾರ್ಮೆಂಟ್ಸ್‌ಗೆ ತೆರಳುತ್ತಿದ್ದರು. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಚಾಲಕನಿಗು ಗಾಯವಾಗಿದೆ.

ಶಿವಮೊಗ್ಗದಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ

car-and-bus-mishap-at-sagara-road-in-Shimoga-city.

ವಿಜಯ ಕುರ್ಲಿ ಗಂಭೀರವಾಗಿ ಗಾಯಗೊಂಡಿದ್ದು ಕೂಡಲೆ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನವಾಗಿತ್ತು. ಆ ಹೊತ್ತಿಗಾಗಲೆ ಅವರು ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಶಿವಮೊಗ್ಗ ಟ್ರಾಫಿಕ್‌ ಪೊಲೀಸರಿಂದ ಹೆಲ್ಪ್‌ಲೈನ್‌ ಶುರು, ವಾಟ್ಸಪ್‌ನಲ್ಲೇ ದಾಖಲಿಸಬಹುದು ದೂರು

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment