ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 7 FEBRUARY 2025
ಸೊರಬ : ರಸ್ತೆಯಲ್ಲಿ ದಿಢೀರ್ ಅಡ್ಡಬಂದ ಜಿಂಕೆಗೆ ಡಿಕ್ಕಿಯಾಗುವುದನ್ನು (Deer) ತಪ್ಪಿಸಲು ಹೋಗಿ ಬೈಕ್ ಅಪಘಾತಕ್ಕೀಡಾಗಿದೆ. ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸೊರಬ ತಾಲೂಕು ಹಾಯಾ ಗ್ರಾಮದ ಶನೈಶ್ಚರ ದೇವಸ್ಥಾನದ ಸಮೀಪ ಅಪಘಾತವಾಗಿದೆ. ಸತೀಶ್ (46) ಎಂಬುವವರು ಹಾಯಾ ಗ್ರಾಮದಿಂದ ರಾತ್ರಿ 12 ಗಂಟೆ ಹೊತ್ತಿಗೆ ತಮ್ಮೂರು ಕುಪ್ಪಗಡ್ಡೆಗೆ ಬೈಕ್‌ನಲ್ಲಿ ಹಿಂತಿರುಗುತ್ತಿದ್ದರು. ರಸ್ತೆಯಲ್ಲಿ ದಿಢೀರ್ ಎದುರಾದ ಜಿಂಕೆಗೆ ಬೈಕ್ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಸತೀಶ್ ಕೆಳಗೆ ಬಿದ್ದು, ತಲೆಗೆ ಗಂಭೀರ ಗಾಯವಾಗಿತ್ತು.

ಹಾಯಾ ಗ್ರಾಮದ ದೇವರಾಜ್ ಎಂಬುವವರಿಗೆ ಸತೀಶ್ ಕರೆ ಮಾಡಿ ಅಪಘಾತದ ವಿಷಯ ತಿಳಿಸಿದ್ದರು. ಕೂಡಲೆ ಸತೀಶ್‌ರನ್ನು ಸೊರಬ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸತೀಶ್ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಂಬಳ, ಟ್ರ್ಯಾಕ್ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಯಾವಾಗ? ಎಲ್ಲಿ ನಡೆಯುತ್ತೆ?
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















