ಸಾಗರ ಮಾರಿ ಜಾತ್ರೆಗು ಮೊದಲು ರಸ್ತೆ ಅಗಲೀಕರಣ ಪೂರ್ಣ, ಯಾವ್ಯಾವ ರಸ್ತೆ ಕುರಿತು MLA ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 10 FEBRUARY 2025

ಸಾಗರ : ಇಲ್ಲಿನ ಆರ್‌.ಪಿ.ರಸ್ತೆಯಲ್ಲಿ (road) ಚರಂಡಿ ನಿರ್ಮಾಣ ಕಾಮಗಾರಿ ಕುರಿತು ಸಾರ್ವಜನಿಕರ ದೂರಿನ ಹಿನ್ನೆಲೆ ಶಾಸಕ, ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಸಾರ್ವಜನಿಕರಿಗೆ ತೊಂದರೆ ಅಗದಂತೆ ಶೀಘ್ರ ಮತ್ತು ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

MLA-Beluru-Gopalakrishna-inspects-road-at-sagara

ಮಾರ್ಕೆಟ್‌ ರಸ್ತೆ ಮತ್ತು ಬಿ.ಹೆಚ್‌.ರಸ್ತೆಗಳಲ್ಲಿ ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಗುತ್ತಿಗೆದಾರನಿಗೆ ಸೂಚಿಸಿದ್ದೇನೆ. ಮುಂದಿನ ಮಾರಿ ಜಾತ್ರೆ ಹೊತ್ತಿಗೆ ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಳ್ಳಲಿದೆ.

ಬೇಳೂರು ಗೋಪಾಲಕೃಷ್ಣ, ಶಾಸಕ

ತ್ವರಿತವಾಗಿ ನಡೆಯುತ್ತಿದೆ ಕಾಮಗಾರಿ

ಮಾರ್ಕೆಟ್‌ ರಸ್ತೆ ಅಗಲೀಕರಣಕ್ಕೆ 29 ಕೋಟಿ ರೂ. ಹಣ ಉಪ ವಿಭಾಗಾಧಿಕಾರಿ ಖಾತೆಯಲ್ಲಿದೆ. ಹಿಂದಿನ ಶಾಸಕರ ಅವಧಿಯಲ್ಲಿ ಒತ್ತಾಯಪೂರ್ವಕವಾಗಿ ಅಲ್ಲಿಯ ಸ್ಥಳೀಯರು ತೆರವಿಗೆ ಮುಂದಾಗಿದ್ದರಿಂದ ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ರಸ್ತೆ ಅಗಲೀಕರಣಕ್ಕೆ ಜಾಗ ಬಿಟ್ಟುಕೊಡಲು ಒಪ್ಪಿಗೆ ನೀಡಿದ್ದಾರೆ. ಶೀಘ್ರ ಪರಿಹಾರದ ಹಣ ನೀಡಿ, ಕಾಮಗಾರಿ ಆರಂಭಿಸಲಾಗುತ್ತದೆ. ಬಿ.ಹೆಚ್‌.ರಸ್ತೆ ಅಗಲೀಕರಣ ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ನಗರಸಭೆ ಪೌರಾಯುಕ್ತ ಹೆಚ್‌.ಕೆ.ನಾಗಪ್ಪ, ಡಿವೈಎಸ್‌ಪಿ ಗೋಪಾಲಕೃಷ್ಣ ನಾಯಕ್‌, ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ, ಮಧುಮಾಲತಿ, ಸೈಯದ್‌ ಜಾಕೀರ್‌ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ವಾಯುಸೇನೆ ಅಧಿಕಾರಿ ಮಂಜುನಾಥ್‌ ಪಂಚಭೂತಗಳಲ್ಲಿ ಲೀನ, ಇಲ್ಲಿದೆ ಇಡೀ ದಿನದ ಕಂಪ್ಲೀಟ್‌ ಮಾಹಿತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 10, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment