ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ : ಪ್ರಕರಣವೊಂದರ ಆರೋಪಿಯ ಕಾಲಿಗೆ ಪೊಲೀಸರು (Police) ಗುಂಡು ಹಾರಿಸಿದ್ದಾರೆ. ಪೊಲೀಸ್ ಸಿಬ್ಬಂದಿಯ ಮೇಲೆ ಆರೋಪಿ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ಸಬ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಗುಂಡ ಅಲಿಯಾಸ್ ರವಿ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಗುಂಡ ಪೊಲೀಸ್ ಸಿಬ್ಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ.
ಈ ವೇಳೆ ಪಿಎಸ್‌ಐ ಕೃಷ್ಣ, ಗುಂಡನಿಗೆ ಶರಣಾಗುವಂತೆ ಸೂಚಿಸಿದರು. ಆಗ ಪಿಎಸ್‌ಐ ಕೃಷ್ಣ ರೌಡಿ ಶೀಟರ್ ಗುಂಡನ ಕಾಲಿಗೆ ಗುಂಡು ಹಾರಿಸಿದ್ದಾರೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ವಾಟ್ಸಪ್ ಮೂಲಕ ತಿಳಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ಸಿಗಬೇಕಿದೆ.


ಇದನ್ನೂ ಓದಿ » ಸಕ್ರೆಬೈಲು ಸಮೀಪ ಓರ್ವ ಮಹಿಳೆ, ಇಬ್ಬರು ಪುರುಷರ ಮೃತದೇಹ ಪತ್ತೆ, ಸ್ಥಳಕ್ಕೆ ಪೊಲೀಸ್ ದೌಡು
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















