ಮೆಗ್ಗಾನ್‌ ಆಸ್ಪತ್ರೆ ವಾರ್ಡ್‌ನಲ್ಲೇ ಪತ್ನಿಯ ಸ್ನೇಹಿತೆ ಮೇಲೆ ಹಲ್ಲೆ ನಡೆಸಿದ ಪತಿ, ವಿಡಿಯೋ ವೈರಲ್

ಶಿವಮೊಗ್ಗ : ಆಸ್ಪತ್ರೆಗೆ (Hospital) ದಾಖಲಾಗಿದ್ದ ಮಹಿಳೆಯ ಆರೈಕೆ ಮಾಡಲು ಬಂದಿದ್ದ ಸ್ನೇಹಿತೆ ಮೇಲೆ ಮಹಿಳೆಯ ಪತಿ ಹಲ್ಲೆ ಮಾಡಿದ್ದಾನೆ. ಇಬ್ಬರು ಕೈ ಕೈ ಮಿಲಾಯಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕೌಟುಂಬಿಕ ಕಲಹದ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಪತ್ನಿ ಮೇಲೆ ಹಲ್ಲೆ ನಡೆಸಿದ್ದ ಎಂದು ಆರೋಪಿಸಲಾಗಿದೆ. ಅಸ್ವಸ್ಥಳಾಗಿದ್ದ ಮಹಿಳೆಯನ್ನು ಆಕೆಯ ಸ್ನೇಹಿತೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಿದ್ದರು.

ವಾರ್ಡ್‌ನಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ಪತಿ, ಆಕೆಯ ಸ್ನೇಹಿತೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಸಾರ್ವಜನಿಕರ ಎದುರಲ್ಲೆ ಅವಾಚ್ಯವಾಗಿ ನಿಂದಿಸಿದ್ದಾನೆ. ಈ ಸಂದರ್ಭ ಪೊಲೀಸ್‌ ಸಿಬ್ಬಂದಿಯೊಬ್ಬರು ಆ ವ್ಯಕ್ತಿಯನ್ನು ವಾರ್ಡ್‌ನಿಂದ ಎಳೆದೊಯ್ದಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

lady-and-a-person-fight-at-mc-gann-hospital

Parishrama advt 10 feb 2025 1

NATIONAL-PUBLIC-SCHOOL-scaled

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಾರ್‌ ಮುಂಭಾಗ ಇಬ್ಬರು ಯುವಕರ ಮೇಲೆ ರಾಡ್‌ನಿಂದ ಅಟ್ಯಾಕ್‌

lady-and-a-person-fight-at-mc-gann-hospital

Leave a Comment