ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಏಕೈಕ ಗಂಡು ಹುಲಿ (Tiger) ವಿಜಯ್ ಇಂದು ಕೊನೆಯುಸಿರೆಳೆದಿದೆ ಎಂದು ಹುಲಿ ಮತ್ತು ಸಿಂಹಧಾಮದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಜನಿಸಿದ್ದ ವಿಜಯ್ (17), ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದೆ. ಕಳೆದ ಒಂದು ತಿಂಗಳಿಂದ ವಿಜಯ್ ನಿಯಮಿತವಾಗಿ ಆಹಾರ ಸೇವಿಸುತ್ತಿರಲಿಲ್ಲ. ಸ್ನಾಯುಗಳಲ್ಲಿ ಸಮಸ್ಯೆ ಉಂಟಾಗಿತ್ತು ಎಂದು ತಿಳಿಸಲಾಗಿದೆ.

ಮೃಗಾಲಯದಲ್ಲಿ ಆಕರ್ಷಣೆಯ ಕೇಂದ್ರವಾಗಿತ್ತು ವಿಜಯ್ ಹುಲಿ. ಇಡೀ ಜೀವನ ಪ್ರಕೃತಿ ಶಿಕ್ಷಣ ಉದ್ದೇಶಕ್ಕೆ ಮೀಸಲಾಗಿತ್ತು. ವಿಜಯ್ ಸಾವಿನಿಂದ ಮೃಗಾಲಯಕ್ಕೆ ದೊಡ್ಡ ನಷ್ಟವಾಗಿದೆ. ನಿಯಮಾನುಸಾರ ವಿಜಯ್‌ನ ಅಂತ್ಯಕ್ರಿಯೆ ನೆರವೇರಿಸಾಗುತ್ತದೆ.
ಅಮರಾಕ್ಷರ, ತ್ಯಾವರೆಕೊಪ್ಪ ಮೃಗಾಲಯದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ
ಮೃಗಾಲಯದಲ್ಲಿ ಗಂಡು ಹುಲಿಗಳೇ ಇಲ್ಲ
ವಿಜಯ್‌ನ ಸಾವಿನಿಂದಾಗಿ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಹುಲಿಗಳ ಸಂಖ್ಯೆ ನಾಲ್ಕಕ್ಕೆ ಇಳಿಕೆಯಾಗಿದೆ. ಅಲ್ಲದೆ ಗಂಡು ಹುಲಿಗಳೇ ಇಲ್ಲವಾಗಿವೆ. ಸದ್ಯ ಮೃಗಾಲಯದಲ್ಲಿ ದಶಮಿ (17), ಸೀತಾ (16), ಪೂರ್ಣಿಮಾ (12) ಮತ್ತು ನಿವೇದಿತಾ (12) ಹುಲಿಗಳಿವೆ.

ಎರಡು ತಿಂಗಳಲ್ಲಿ ಎರಡನೇ ಹುಲಿ ಸಾವು
ತ್ಯಾವರೆಕೊಪ್ಪ ಸಿಂಹಧಾಮದಲ್ಲಿ ಈ ವರ್ಷದಲ್ಲಿ ಎರಡನೇ ಹುಲಿ ಕೊನೆಯುಸಿರೆಳೆಯುತ್ತಿದೆ. ಜನವರಿ 8ರಂದು 17 ವರ್ಷದ ಅಂಜನಿ ಎಂಬ ಹುಲಿ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮೃತಪಟ್ಟಿತ್ತು. ಈಗ ವಯೋಸಹಜ ಸಮಸ್ಯೆಯಿಂದಾಗಿ ವಿಜಯ್ ಕೊನೆಯುಸಿರೆಳೆದಿದೆ.

ಇದನ್ನೂ ಓದಿ » ಭದ್ರಾವತಿಯ 19 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು















